ADVERTISEMENT

ಅತ್ಯಾಚಾರ ವಿರೋಧಿ ಪ್ರತಿಭಟನೆ ವೇಳೆ ಗಾಯಗೊಂಡಿದ್ದ ಪೇದೆ ಸಾವು

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2012, 6:57 IST
Last Updated 25 ಡಿಸೆಂಬರ್ 2012, 6:57 IST
​ಆಸ್ಪತ್ರೆಯ ತುರ್ತು ನೀಗಾ ಘಟಕದಲ್ಲಿ ಕೃತಕ ಉಸಿರಾಟ ವ್ಯವಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಭಾಷ್ (ಒಳಚಿತ್ರದಲ್ಲಿ). -ಪಿಟಿಐ ಚಿತ್ರ.
​ಆಸ್ಪತ್ರೆಯ ತುರ್ತು ನೀಗಾ ಘಟಕದಲ್ಲಿ ಕೃತಕ ಉಸಿರಾಟ ವ್ಯವಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಭಾಷ್ (ಒಳಚಿತ್ರದಲ್ಲಿ). -ಪಿಟಿಐ ಚಿತ್ರ.   

ನವದೆಹಲಿ (ಪಿಟಿಐ): ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಖಂಡಿಸಿ ಇಂಡಿಯಾ ಗೇಟ್ ಬಳಿ ಭಾನುವಾರ ನಡೆದ ಪ್ರತಿಭಟನೆ ವೇಳೆ ಉಂಟಾದ ಹಿಂಸಾಚಾರದಲ್ಲಿ ಗಾಯಗೊಂಡಿದ್ದ ದೆಹಲಿ ಪೊಲೀಸ್ ಪೇದೆಯೊರ್ವ ಮಂಗಳವಾರ ಬೆಳಿಗ್ಗೆ ರಾಮಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಭಾನುವಾರ ನಡೆದ ಹಿಂಸಾಚಾರದಲ್ಲಿ ತೀವ್ರವಾಗಿ ಗಾಯಗೊಂಡು ರಾಮಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದೆಹಲಿ ಪೊಲೀಸ್ ಪೇದೆ ಸುಭಾಷ್ ಚಂದ್ ತೋಮರ್ (47) ಅವರು ಮಂಗಳವಾರ ಬೆಳಿಗ್ಗೆ ಕೊನೆಯುಸಿರೆಳೆದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಖರ್‌ವಾಲ್ ನಗರ ಪ್ರದೇಶದ ಠಾಣೆಯಲ್ಲಿ ಕರ್ತವ್ಯದ ಮೇಲಿದ್ದ ಸುಭಾಷ್ ಅವರನ್ನು ಪ್ರತಿಭಟನೆ ಹಿನ್ನೆಲೆಯಲ್ಲಿ ಇಂಡಿಯಾ ಗೇಟ್ ಬಳಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಹಿಂಸಾಚಾರದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಯ ತುರ್ತು ನೀಗಾ ಘಟಕದಲ್ಲಿ ಕೃತಕ ಉಸಿರಾಟ ವ್ಯವಸ್ಥೆಯಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.