ADVERTISEMENT

ಅನ್ಸಾಲ್‌ ಸಹೋದರರಿಗೆ ಶಿಕ್ಷೆ: ತೀರ್ಪು ಎತ್ತಿ ಹಿಡಿದ ಸುಪ್ರೀಂಕೋರ್ಟ್

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2014, 19:30 IST
Last Updated 5 ಮಾರ್ಚ್ 2014, 19:30 IST

ನವದೆಹಲಿ (ಐಎಎನ್‌ಎಸ್‌):  ಉಪಹಾರ್‌ ಸಿನಿಮಾ ಮಂದಿರ ಬೆಂಕಿ ದುರಂತಕ್ಕೆ  ಸಂಬಂಧಿಸಿ ದೆಹಲಿ ಹೈಕೋರ್ಟ್ ಸುಶೀಲ್‌ ಹಾಗೂ ಗೋಪಾಲ್‌ ಅನ್ಸಾಲ್‌ ಸಹೋದ­ರರಿಗೆ ವಿಧಿಸಿರುವ ಶಿಕ್ಷೆಯನ್ನು ಸುಪ್ರೀಂ­­ಕೋರ್ಟ್ ಬುಧವಾರ ಎತ್ತಿಹಿಡಿದಿದೆ.

ವಿಚಾರಣಾ ಕೋರ್ಟ್ ಈ ಸಹೋದರರಿಗೆ ಎರಡು ವರ್ಷಗಳ ಶಿಕ್ಷೆ ವಿಧಿಸಿತ್ತು. ಆದರೆ ದೆಹಲಿ ಹೈಕೋರ್ಟ್  ಶಿಕ್ಷೆಯನ್ನು ಒಂದು ವರ್ಷಕ್ಕೆ ಇಳಿಸಿ 2008ರಲ್ಲಿ ತೀರ್ಪು ನೀಡಿತ್ತು.ನ್ಯಾಯಮೂರ್ತಿ ಟಿ.ಎಸ್‌. ಠಾಕೂರ್‌ ಅವರು, ದೆಹಲಿ ಹೈಕೋರ್ಟ್ ನೀಡಿದ ತೀರ್ಪನ್ನು ಎತ್ತಿಹಿಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.