ADVERTISEMENT

ಅಪಘಾತ: ಪಾಕ್ ರಾಜತಾಂತ್ರಿಕ ಅಧಿಕಾರಿ ಮೇಲೆ ಹಲ್ಲೆ

​ಪ್ರಜಾವಾಣಿ ವಾರ್ತೆ
Published 3 ಜೂನ್ 2013, 20:12 IST
Last Updated 3 ಜೂನ್ 2013, 20:12 IST

ನವದೆಹಲಿ (ಪಿಟಿಐ): ದಕ್ಷಿಣ ದೆಹಲಿಯಲ್ಲಿ ಸೋಮವಾರ ಸಂಜೆ ಅಪಘಾತ ನಡೆದ ಸಂದರ್ಭದಲ್ಲಿ ಪಾಕಿಸ್ತಾನದ ಹಿರಿಯ ರಾಜತಾಂತ್ರಿಕ ಅಧಿಕಾರಿ ಮತ್ತು ಅವರ ವಾಹನದ ಚಾಲಕನ ಮೇಲೆ ಹಲ್ಲೆ ನಡೆದ ಘಟನೆ ವರದಿಯಾಗಿದೆ.

ಪಾಕ್ ಹೈಕಮಿಷನ್ನಿನ  ಮೊದಲ ಕಾರ್ಯದರ್ಶಿ (ವ್ಯಾಪಾರ) ಜಿರ್ಗಮ್ ರಾಜಾ ಅವರು ಮನೆಗೆ ಹಿಂದಿರುಗುತ್ತಿದ್ದಾಗ ಸಂಜೆ 7.25ರ ಸುಮಾರಿಗೆ ಬೆರ್ ಸರಾಯ್ ಎಂಬಲ್ಲಿ ಈ ಘಟನೆ ನಡೆದಿದೆ.

`ರಾಜಾ ಅವರಿದ್ದ ವಾಹನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆಯಿತು. ಇದೊಂದು ಪುಟ್ಟ ಅಪಘಾತವಾಗಿದ್ದು, ಯಾರಿಗೂ ಗಾಯಗಳಾಗಿಲ್ಲ' ಎಂದು ಪೊಲೀಸರು ಹೇಳಿದ್ದಾರೆ.

ಆದರೆ, ಈ ಘಟನೆ ಬಗ್ಗೆ ವಿವಿಧ ರೀತಿಯ ಹೇಳಿಕೆಗಳು ಕೇಳಿ ಬಂದಿವೆ. ಘಟನೆ ಖಂಡಿಸಿರುವ ಪಾಕ್ ಹೈಕಮಿಷನ್, ವಿದೇಶಾಂಗ ಸಚಿವಾಲಯಕ್ಕೆ ತನ್ನ ಪ್ರತಿಭಟನೆ ದಾಖಲಿಸಿದೆ.

ರಾಜತಾಂತ್ರಿಕ ಅಧಿಕಾರಿ ಮತ್ತು ಚಾಲಕನ ಮೇಲೆ ಕೆಲವರು ಹಲ್ಲೆ ನಡೆಸಿದ್ದು, ಈ ಬಗ್ಗೆ ತನಿಖೆ ನಡೆಸಬೇಕು ಮತ್ತು ಇಲ್ಲಿರುವ ಪಾಕ್ ಅಧಿಕಾರಿಗಳಿಗೆ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.