ADVERTISEMENT

ಅಪಘಾತ: 12 ಮಕ್ಕಳ ದಾರುಣ ಸಾವು

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2012, 11:30 IST
Last Updated 20 ಮಾರ್ಚ್ 2012, 11:30 IST

ಹೈದರಾಬಾದ್ (ಪಿಟಿಐ/): ಶಾಲಾ ಮಕ್ಕಳಿದ್ದ ಬಸ್ಸೊಂದು ಖಮ್ಮಂ ಜಿಲ್ಲೆಯ ಕಾಲುವೆಗೆ ಉರುಳಿ ಬಿದ್ದ ಪರಿಣಾಮ 12 ಕ್ಕೂ ಅಧಿಕ ಮಕ್ಕಳು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.

ಈವರೆಗೂ 12 ಮಕ್ಕಳು ಸಾವನ್ನಪ್ಪಿರುವುದನ್ನು ಪೊಲೀಸರು ಖಚಿತಪಡಿಸಿದ್ದು, ಇನ್ನಷ್ಟು ಮಕ್ಕಳು ಸಾವನ್ನಪ್ಪಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಬಸ್‌ನಲ್ಲಿ 50 ಮಕ್ಕಳಿದ್ದರು. ಗಾಯಗೊಂಡ ಕೆಲವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.  ಇನ್ನೂ ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. ಸದ್ಯಕ್ಕೆ ಕಾಲುವೆಯಲ್ಲಿ ಹೆಚ್ಚಿನ ನೀರಿನ ಹರಿವು ಇಲ್ಲದೇ ಇದ್ದುದರಿಂದ ಯಾವ ಮಕ್ಕಳೂ ಕೊಚ್ಚಿಕೊಂಡು ಹೋಗಿರುವ ಸಾಧ್ಯತೆ ಇಲ್ಲ ಎನ್ನಲಾಗಿದೆ.

ಮಕ್ಕಳೆಲ್ಲಾ ಖಾಸಗಿ ಶಾಲೆಗೆ ಸೇರಿದವರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಕಿರಣ್‌ಕುಮಾರ್ ರೆಡ್ಡಿ ಅವರು ಘಟನೆ ಬಗೆಗೆ ತನಿಖೆಗೆ ಆದೇಶಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT