
ಪ್ರಜಾವಾಣಿ ವಾರ್ತೆಮೀರತ್ (ಪಿಟಿಐ): ಮಹಿಳೆಯರು ತಮ್ಮ ಮೇಲೆ ನಡೆಯುವ ದೌರ್ಜನ್ಯಗಳ ವಿರುದ್ಧ ಧ್ವನಿ ಎತ್ತದೆ ಮೌನವಾಗಿರಬಾರದು ಎಂದು ಹಿಂದಿ ಚಿತ್ರ ನಟ ಅಮಿರ್‌ಖಾನ್ ಹೇಳಿದ್ದಾರೆ.
ಸದ್ಯದಲ್ಲೇ ತೆರೆ ಕಾಣಲಿರುವ `ತಲಾಷ್' ಸಿನಿಮಾದಲ್ಲಿ ಪೊಲೀಸ್ ಪಾತ್ರ ನಿರ್ವಹಿಸಿರುವ ಅಮಿರ್ ಖಾನ್ ಮಹಿಳೆಯರು ಅಪರಾಧಗಳ ವಿರುದ್ಧ ಧ್ವನಿ ಎತ್ತಬೇಕು. ತಮ್ಮ ಮೇಲಾಗುವ ಯಾವುದೇ ಕೃತ್ಯಗಳನ್ನು ಸಹಿಸಿಕೊಳ್ಳಬಾರದು ಎಂದಿದ್ದಾರೆ. `ತಲಾಷ್' ಚಿತ್ರದ ಪ್ರಚಾರಕ್ಕಾಗಿ ಇಲ್ಲಿಗೆ ಬಂದಿರುವ ಅಮೀರ್, ಪೊಲೀಸರ ಕಾರ್ಯನಿರ್ವಹಣೆಯಲ್ಲಿ ರಾಜಕೀಯ ನಾಯಕರು, ಉನ್ನತ ಅಧಿಕಾರಿಗಳು ಹಸ್ತಕ್ಷೇಪ ಮಾಡಬಾರದು ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.