ADVERTISEMENT

ಅಪ್ರಾಪ್ತ ವಯಸ್ಸಿನ ಪತ್ನಿಯೊಂದಿಗೆ ಲೈಂಗಿಕಕ್ರಿಯೆ ಅತ್ಯಾಚಾರ: ‘ಸುಪ್ರೀಂ’

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2017, 19:30 IST
Last Updated 11 ಅಕ್ಟೋಬರ್ 2017, 19:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: 18 ವರ್ಷದೊಳಗಿನ ಪತ್ನಿಯ ಜತೆ ನಡೆಸುವ ಸಮ್ಮತಿಯ ಲೈಂಗಿಕ ಕ್ರಿಯೆಯನ್ನು ‘ಅತ್ಯಾಚಾರ‘ ಎಂದು ಪರಿಗಣಿಸಲಾಗುವುದು ಎಂದು ಸುಪ್ರೀಂಕೋರ್ಟ್ ಬುಧವಾರ ಐತಿಹಾಸಿಕ ತೀರ್ಪು ನೀಡಿದೆ.

‘ಇಂಡಿಪೆಂಡೆಂಟ್‌ ಥಾಟ್‌’ ಎಂಬ ಸ್ವಯಂಸೇವಾ ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಅಪ್ರಾಪ್ತ ವಯಸ್ಸಿನ ಪತ್ನಿಯ ಜತೆಗಿನ ಲೈಂಗಿಕ ಸಂಪರ್ಕ ಅಪರಾಧವಾಗುತ್ತದೆ ಎಂದು ಸ್ಪಷ್ಟವಾಗಿ ಹೇಳಿದೆ. ದೇಶದಲ್ಲಿ ನಡೆಯುತ್ತಿರುವ ಬಾಲ್ಯ ವಿವಾಹ ಮತ್ತು ಅತ್ಯಾಚಾರ ತಡೆಯುವ ನಿಟ್ಟಿನಲ್ಲಿ ಈ ತೀರ್ಪು ಮಹತ್ವದ ಪಾತ್ರ ವಹಿಸಲಿದೆ ಎಂದು ಬಣ್ಣಿಸಲಾಗಿದೆ.

ಸಮ್ಮತಿಯ ಲೈಂಗಿಕ ಕ್ರಿಯೆಗಾಗಿ ವಯೋಮಿತಿ ಇಳಿಕೆ ಅಥವಾ ಸಡಲಿಕೆ ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿಗಳಾದ ಮದನ್ ಲೋಕೂರ್‌ ಮತ್ತು ದೀಪಕ್‌ ಗುಪ್ತಾ ಅವರ ಪೀಠಸ್ಪಷ್ಟಪಡಿಸಿದೆ. ಇಂತಹ ಪ್ರಕರಣ ಗಳಲ್ಲಿ ಅತ್ಯಾಚಾರ ನಡೆದು ಒಂದು ವರ್ಷದೊಳಗಾಗಿ ದೂರು ದಾಖಲಿಸಬೇಕು. ಇಲ್ಲದಿದ್ದರೆ ಅಂತಹ ದೂರನ್ನು ಪರಿಗಣಿಸಲಾಗುವುದಿಲ್ಲ ಎಂದೂ ಹೇಳಿದೆ. ಅಸಮ್ಮತಿಯ ಹೊರತಾಗಿಯೂ ಆಕೆಯೊಂದಿಗೆ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸುವ ‘ವೈವಾಹಿಕ ಅತ್ಯಾಚಾರ’ದ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ. ಸೆಕ್ಷನ್‌ 375ರ (ಅತ್ಯಾಚಾರ) ಅಡಿ ಅಪ್ರಾಪ್ತ ವಯಸ್ಸಿನ ಪತ್ನಿಯ ಜತೆಗಿನ ಲೈಂಗಿಕ ಸಂಬಂಧವನ್ನು ಅಪರಾಧ ಎಂದು ಪರಿಗಣಿಸಿಲ್ಲ. ಪುರುಷರಿಗೆ ವಿನಾಯಿತಿ ನೀಡು
ವುದರಿಂದ ಅಪ್ರಾಪ್ತ ಪತ್ನಿಯರ ಹಕ್ಕು ಮೊಟಕುಗೊಳಿಸಿದಂತಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.