ADVERTISEMENT

ಅಮರನಾಥ ಯಾತ್ರೆ: 10ರಿಂದ ನೋಂದಣಿ

​ಪ್ರಜಾವಾಣಿ ವಾರ್ತೆ
Published 3 ಮೇ 2011, 19:30 IST
Last Updated 3 ಮೇ 2011, 19:30 IST

ಜಮ್ಮು (ಪಿಟಿಐ): ವಾರ್ಷಿಕ ಅಮರನಾಥ ಯಾತ್ರೆಗೆ ಮೇ 10 ರಿಂದ  ನೋಂದಣಿ ಪ್ರಾರಂಭವಾಗಲಿದೆ ಎಂದು ಶ್ರೀ ಅಮರನಾಥ ದೇವಸ್ಥಾನ ಮಂಡಳಿ ತಿಳಿಸಿದೆ.

‘ಜಮ್ಮು ಮತ್ತು ಕಾಶ್ಮೀರದಲ್ಲಿ ಈ ವರ್ಷದ ಅಮರನಾಥ ಯಾತ್ರೆಯ ವಿವರವನ್ನು  ಶ್ರೀ ಅಮರನಾಥ ದೇವಸ್ಥಾನ ಮಂಡಳಿಯ ಕಾರ್ಯನಿರ್ವಾಹಕ ಅಧಿಕಾರಿ ಆರ್.ಕೆ. ಗೋಯಲ್ ಮಂಗಳವಾರ ತಿಳಿಸಿದ್ದಾರೆ.

ಯಾತ್ರಾರ್ಥಿಗಳ ನೋಂದಣಿ ಜಮ್ಮು ಮತ್ತು ಕಾಶ್ಮೀರದ 121 ಗೊತ್ತುಪಡಿಸಿದ ಬ್ಯಾಂಕ್‌ಗಳಲ್ಲಿ, ಎಸ್  ಬ್ಯಾಂಕ್‌ನ 24 ಶಾಖೆಗಳಲ್ಲಿ ಮತ್ತು ನಾಲ್ಕು ಜಿಲ್ಲಾ ಸಹಕಾರಿ ಬ್ಯಾಂಕ್‌ಗಳಲ್ಲಿ ಆರಂಭವಾಗಲಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.