ನವದೆಹಲಿ (ಪಿಟಿಐ): 2008ರ ವೋಟಿಗಾಗಿ ನೋಟು ಪ್ರಕರಣದ ಆರೋಪಿ ರಾಜ್ಯಸಭಾ ಸದಸ್ಯ ಅಮರ್‌ಸಿಂಗ್ ಅವರಿಗೆ ಅನಾರೋಗ್ಯದ ಹಿನ್ನಲೆಯಲ್ಲಿ ಸೆಪ್ಟಂಬರ್ 19ರ ವರೆಗೆ ದೆಹಲಿ ನ್ಯಾಯಾಲಯ ಗುರುವಾರ ಮಧ್ಯಂತರ ಜಾಮೀನು ನೀಡಿದೆ.
ತಮ್ಮ ಪಾಸ್‌ಪೋರ್ಟ್‌ನ್ನು ನ್ಯಾಯಾಲಯಕ್ಕೆ ಒಪ್ಪಿಸುವಂತೆ ಸೂಚಿಸಿರುವ ನ್ಯಾಯಾಲಯ ದೆಹಲಿ ತೊರೆಯದಂತೆ ಸೂಚನೆ ನೀಡಿದೆ.
2008ರ ವೋಟಿಗಾಗಿ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟಂಬರ್ 6 ರಂದು ಅಮರ್‌ಸಿಂಗ್ ಅವರನ್ನು ಬಂಧಿಸಲಾಗಿತ್ತು. ನಂತರ ಅವರನ್ನು ಅನಾರೋಗ್ಯದ ಕಾರಣದಿಂದ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ಗೆ ದಾಖಲಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.