ADVERTISEMENT

ಅಮರ್‌ಸಿಂಗ್ ಭೇಟಿ ಮಾಡಿದ ಅಮಿತಾಭ್

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2011, 19:30 IST
Last Updated 18 ಸೆಪ್ಟೆಂಬರ್ 2011, 19:30 IST

ನವದೆಹಲಿ (ಐಎಎನ್‌ಎಸ್): ಇಲ್ಲಿನ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವ ರಾಜ್ಯಸಭಾ ಸದಸ್ಯ ಅಮರ್ ಸಿಂಗ್ ಅವರನ್ನು ಭಾನುವಾರ ಖ್ಯಾತ ನಟ ಅಮಿತಾಭ್ ಬಚ್ಚನ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

`ವೋಟಿಗಾಗಿ ನೋಟು~ ಹಗರಣದಲ್ಲಿ ಪ್ರಮುಖ ಆರೋಪಿಯಾಗಿರುವ ಅಮರ್‌ಸಿಂಗ್ ಅವರಿಗೆ ನ್ಯಾಯಾಲಯ ಸೆ.19ರ ವರೆಗೆ ಮಧ್ಯಂತರ ಜಾಮೀನು ನೀಡಿದೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಸೆ..13ರಂದು ಇಲ್ಲಿನ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲು ಮಾಡಲಾಗಿದೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.