ಮುಂಬಯಿ (ಪಿಟಿಐ): ತೆಹೆಲ್ಕಾ ಪ್ರಧಾನ ಸಂಪಾದಕ ತರುಣ್ ತೇಜಪಾಲ್ ಕಿರಿಯ ಮಹಿಳಾ ಸಹೋದ್ಯೋಗಿ ಜತೆ ಅನುಚಿತವಾಗಿ ನಡೆದುಕೊಳ್ಳುತ್ತಾರೆ ಎಂದುಕೊಂಡಿರಲಿಲ್ಲ ಬಾಲಿವುಡ್ ನಟ ಅಮೀರ್ ಖಾನ್ ಆಘಾತ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ತೇಜ್ಪಾಲ್ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಾರೆ ಎನ್ನಲಾದ ಯುವ ಪತ್ರಕರ್ತೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
‘ತರುಣ್ ನನಗೆ ಚೆನ್ನಾಗಿ ಗೊತ್ತು. ಆದರೆ, ಅವರು ಈ ರೀತಿ ನಡೆದುಕೊಳ್ಳುತ್ತಾರೆ ಎಂದು ಎಣಿಸಿರಲಿಲ್ಲ. ನಿಜಕ್ಕೂ ನನಗೆ ಆಘಾತವಾಗಿದೆ. ಆದರೆ, ನಾವೆಲ್ಲರೂ ಆ ಯುವತಿಯ ಬೆಂಬಲಕ್ಕೆ ನಿಲ್ಲಬೇಕಿದೆ’ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.