ಅಹಮದಾಬಾದ್: ಅಮೂಲ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಕೆ.ರತ್ನಮ್ ಸಲ್ಲಿಸಿದ್ದ ರಾಜೀನಾಮೆಯನ್ನು ಶನಿವಾರ ನಡೆದ ವಿಶೇಷ ಮಂಡಳಿ ಸಭೆಯಲ್ಲಿ ಅಂಗೀಕರಿಸಲಾಗಿದೆ.
ಕೇರಳದ ಖಾಸಗಿ ಕಂಪನಿಯಿಂದ ಚೀಸ್ ಹಾಗೂ ಚಾಕೋಲೇಟ್ ಖರೀದಿ ವ್ಯವಹಾರದಲ್ಲಿ ಭಾರೀ ಅಕ್ರಮ ನಡೆದಿದ್ದು ಅಮೂಲ್ ಕಂಪನಿಗೆ ₹500 ಕೋಟಿ ನಷ್ಟವಾಗಿತ್ತು. ಈ ಅಕ್ರಮದಲ್ಲಿ ರತ್ನಮ್ ಭಾಗಿಯಾಗಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಕುಟುಂಬದ ಸದಸ್ಯರೊಂದಿಗೆ ಸಮಯ ಕಳೆಯಲು ಹಾಗೂ ವೈಯಕ್ತಿಕ ಕಾರಣದಿಂದ ರಾಜೀನಾಮೆ ನೀಡಿರುವುದಾಗಿ ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.