ADVERTISEMENT

ಅರುಣಾಚಲ ಪ್ರದೇಶ: ವಿಧಾನಸಭೆ ತಡರಾತ್ರಿ ವಿಸರ್ಜನೆ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2014, 20:19 IST
Last Updated 6 ಮಾರ್ಚ್ 2014, 20:19 IST

ಇಟಾನಗರ (ಪಿಟಿಐ): ಅರುಣಾಚಲ ಪ್ರದೇಶ ವಿಧಾನಸಭೆಯನ್ನು ಗುರುವಾರ ತಡರಾತ್ರಿ ವಿಸರ್ಜಿಸಲಾಗಿದೆ.

ಮುಂದಿನ ತಿಂಗಳು ಲೋಕಸಭೆ ಚುನಾವಣೆಯ ಜೊತೆ ರಾಜ್ಯ ವಿಧಾನಸಭೆಗೂ ಚುನಾವಣೆ ನಡೆಸುವಂತೆ ಸಂಪುಟ ಸಭೆ ಶಿಫಾರಸು ಮಾಡಿದ ಹಿನ್ನೆಲೆಯಲ್ಲಿ ರಾಜ್ಯಪಾಲ ನಿರ್ಭಯ ಶರ್ಮಾ ಅವರು ಈ ಕ್ರಮ ಕೈಗೊಂಡಿದ್ದಾರೆ.

ಏಪ್ರಿಲ್‌ ೯ರಂದು ಇಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು ಚುನಾವಣಾ ವೆಚ್ಚ ಕಡಿಮೆ ಮಾಡುವ ಸಲುವಾಗಿ ಆಗಲೇ ವಿಧಾನಸಭೆಗೂ ಚುನಾವಣೆ ನಡೆಸಲು ಸಂಪುಟ ನಿರ್ಧರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.