ಇಟಾನಗರ: ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಾಲಿಖೋ ಪುಲ್ ಅವರು ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ.
47 ವರ್ಷದ ಕಾಲಿಖೋ ಪುಲ್ ಅವರು ರಾಜಧಾನಿ ಇಟಾನಗರದಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
2016ರ ಫೆಬ್ರವರಿ 19ರಂದು ಅವರು ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ನಂತರದ ಬೆಳವಣಿಗೆಗಳಲ್ಲಿ ಅವರು ಮುಖ್ಯಮಂತ್ರಿ ಹುದ್ದೆಗೆ ರಾಜಿನಾಮೆ ಸಲ್ಲಿಸಿದ್ದರು.
ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದ ಬಳಿಕ ಕಾಲಿಖೋ ಪುಲ್ ಅವರು ಖಿನ್ನತೆಗೆ ಒಳಗಾಗಿದ್ದರು ಎಂದು ಅವರ ಆಪ್ತರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.