
ಪ್ರಜಾವಾಣಿ ವಾರ್ತೆನವದೆಹಲಿ (ಪಿಟಿಐ): ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ರೈಲ್ವೆ ಸಚಿವೆ ಮತ್ತು ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ, ‘ಲೋಕಸಭೆಯಲ್ಲಿ ಮಹಿಳಾ ಮೀಸಲು ಮಸೂದೆ ಮಂಡಿಸುವಾಗ ಅಲ್ಪಸಂಖ್ಯಾತರ ಭಾವನೆಗಳನ್ನು ಗಮನದಲ್ಲಿರಿಸಿಕೊಳ್ಳಬೇಕು’ ಎಂದು ಅಭಿಪ್ರಾಯಪಟ್ಟಿದ್ದಾರೆ.
ಅವರು ಮಂಗಳವಾರ ಇಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ‘ಮಹಿಳಾ ಮೀಸಲು ಮಸೂದೆಗೆ ನಮ್ಮ ಸಂಪೂರ್ಣ ಬೆಂಬಲವಿದೆ, ಆದರೆ ಅಲ್ಪಸಂಖ್ಯಾತರ ಕೆಲವು ಭಾವನೆಗಳನ್ನು ನಾವು ಪರಿಗಣಿಸಬೇಕಿದೆ’ ಎಂದು ನುಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.