ADVERTISEMENT

ಅವಧಿ ಮೀರಿ ಸೇವೆ ಸಲ್ಲ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2012, 19:30 IST
Last Updated 10 ಮಾರ್ಚ್ 2012, 19:30 IST

ನವದೆಹಲಿ: ಆಯುರ್ವೇದ, ಸಿದ್ಧ ಹಾಗೂ ಯುನಾನಿ ಪದ್ಧತಿಗೆ ಸಂಬಂಧಿಸಿದಂತೆ ಭಾರತೀಯ ವೈದ್ಯಕೀಯ ಮಂಡಳಿಯ ಚುನಾಯಿತ ಪದಾಧಿಕಾರಿಗಳು ಐದು ವರ್ಷಗಳ ತಮ್ಮ ಸೇವಾವಧಿ ಮುಗಿದ ಮೂರು ತಿಂಗಳ ನಂತರವೂ ಹುದ್ದೆಯಲ್ಲಿ ಮುಂದುವರಿಯುವಂತಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

 ಮಂಡಳಿ ಪದಾಧಿಕಾರಿಗಳ ಆಯ್ಕೆಗೆ ಸರ್ಕಾರವು ದೀರ್ಘ ಕಾಲದಿಂದಲೂ ಚುನಾವಣೆ ನಡೆಸಿಲ್ಲ ಎಂದು ಆರೋಪಿಸಿ ಕೆ.ಬಿ.ನಾಗೂರು ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ  ಎಸ್.ಎಚ್.ಕಪಾಡಿಯ ಅವರನ್ನು ಒಳಗೊಂಡ ಪೀಠವು ಹೀಗೆ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.