ADVERTISEMENT

ಅಸಾರಾಂ ಬಾಪು ಪ್ರಕರಣದ ತೀರ್ಪು ಹಿನ್ನೆಲೆ: 378 ಮಂದಿಯ ಬಂಧನ

ಏಜೆನ್ಸೀಸ್
Published 25 ಏಪ್ರಿಲ್ 2018, 6:23 IST
Last Updated 25 ಏಪ್ರಿಲ್ 2018, 6:23 IST
ಅಸಾರಾಂ ಬಾಪು (ಸಂಗ್ರಹ ಚಿತ್ರ)
ಅಸಾರಾಂ ಬಾಪು (ಸಂಗ್ರಹ ಚಿತ್ರ)   

ಜೋಧಪುರ: ಅಸಾರಾಂ ಬಾಪು ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿನ ವಿಚಾರಣಾ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ 378 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಏಪ್ರಿಲ್ 28ರ ವರೆಗೂ ಬಂಧಿತರನ್ನು ಪೊಲೀಸ್ ವಶದಲ್ಲಿರಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ತೀರ್ಪಿನ ಹಿನ್ನೆಲೆಯಲ್ಲಿ ಭದ್ರತೆ ಹೆಚ್ಚಿಸುವಂತೆ ರಾಜಸ್ಥಾನ, ಗುಜರಾತ್ ಮತ್ತು ಹರಿಯಾಣ ರಾಜ್ಯಗಳಿಗೆ ಕೇಂದ್ರ ಸರ್ಕಾರ ಈಗಾಗಲೇ ಸೂಚಿಸಿದೆ.

ತೀರ್ಪು ಪ್ರಕಟವಾಗಲಿರುವ ನ್ಯಾಯಾಲಯದ ಆವರಣದಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ. ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಜೋಧಪುರದಲ್ಲಿ ನಿಷೇಧಾಜ್ಞೆ: ಅಸಾರಾಂ ಅನುಯಾಯಿಗಳಿಂದ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗಬಹುದು ಎಂಬ ಭೀತಿ ಇದ್ದು, ಎಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇದು ಇದೇ 30ರವರೆಗೂ ಮುಂದುವರಿಯಲಿದೆ.

ಪ್ರಕರಣದ ಹಿನ್ನೆಲೆ: 2013ರ ಆಗಸ್ಟ್ 15ರಂದು ಅಸಾರಾಂ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಛಿಂದ್ವಾರದಲ್ಲಿರುವ ಅಸಾರಾಂ ಆಶ್ರಮದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಉತ್ತರಪ್ರದೇಶದ ಷಹಜಹಾನ್‌ಪುರದ ಬಾಲಕಿ ದೂರು ನೀಡಿದ್ದಳು. ದೂರು ಆಧರಿಸಿ 2013ರ ಸೆಪ್ಟೆಂಬರ್ 1ರಂದು ಇಂದೋರ್‌ನಲ್ಲಿ ಅಸಾರಾಂ ಅವರನ್ನು ಬಂಧಿಸಿ ಜೋಧಪುರಕ್ಕೆ ಕರೆತರಲಾಗಿತ್ತು. 2013ರ ಸೆಪ್ಟೆಂಬರ್ 2ರಿಂದ ಅಸಾರಾಂ ನ್ಯಾಯಾಂಗ ವಶದಲ್ಲಿದ್ದಾರೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.