ADVERTISEMENT

ಅಸ್ಸಾಂನಲ್ಲಿ ಪ್ರತ್ಯೇಕ ರಾಜ್ಯ ಕೂಗು: ಮುಂದುವರಿದ ಹಿಂಸಾಚಾರ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2013, 12:34 IST
Last Updated 3 ಆಗಸ್ಟ್ 2013, 12:34 IST

ದಿಫು/ಗುವಾಹಟಿ(ಪಿಟಿಐ): ತೆಲಂಗಾಣ ಮಾದರಿಯಲ್ಲಿ ಪ್ರತ್ಯೇಕ  ಕರ್ಬಿ ಅಂಗ್ಲೋಂಗ್ ರಾಜ್ಯ ರಚನೆ ಮಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ, ಹಿಂಸಾಚಾರ ಶನಿವಾರ ಮುಂದುವರಿದಿದ್ದು, ಪ್ರತಿಭಟನಾಕಾರರು ಸರ್ಕಾರಿ ಕಚೇರಿಗಳಿಗೆ ಬೆಂಕಿ ಹಚ್ಚಿ, ರೈಲು ಹಳಿಗಳನ್ನು ಧ್ವಂಸ ಮಾಡಿದ್ದಾರೆ.

ಸರ್ಕಾರಿ ಕಚೇರಿಗಳಿಗೆ ಬೆಂಕಿ ಹಚ್ಚಿ, ಹಳಿಗಳನ್ನು ಧ್ವಂಸಗೊಳಿಸಿರುವ ಹಿನ್ನೆಲೆಯಲ್ಲಿ ಪ್ರಕ್ಷ್ಯುಬ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ರೈಲು ಸಂಚಾರ ವ್ಯತ್ಯಯವಾಗಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.

ಪರಿಸ್ಥಿತಿ ನಿಯಂತ್ರಿಸಲು ಕರ್ಬಿ ಜಿಲ್ಲೆಯಲ್ಲಿ ನಿಷೇದಾಜ್ಞೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.