ADVERTISEMENT

ಅಸ್ಸಾಂ ಮೊದಲ ಹಂತದ ಚುನಾವಣೆಗೆ ಸಿದ್ಧ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2011, 19:30 IST
Last Updated 3 ಏಪ್ರಿಲ್ 2011, 19:30 IST

ಗುವಾಹಟಿ, (ಪಿಟಿಐ): ಅಸ್ಸಾಂನಲ್ಲಿ ಮೊದಲ ಹಂತದ ವಿಧಾನಸಭಾ ಚುನಾವಣೆಗಾಗಿ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದು, 13 ಜಿಲ್ಲೆಗಳ 62 ಕ್ಷೇತ್ರಗಳಿಗೆ ಬಿಗಿ ಭದ್ರತೆಯ ನಡುವೆ ಸೋಮವಾರ ಚುನಾವಣೆ ನಡೆಯಲಿದೆ.

ದೂರದ ಕ್ಷೇತ್ರಗಳಿಗೆ ನೇಮಕಗೊಂಡಿರುವ ಚುನಾವಣಾ ಸಿಬ್ಬಂದಿ ಶುಕ್ರವಾರದಂದೇ ಮತಗಟ್ಟೆಗಳಿಗೆ ತೆರಳಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸಿಬ್ಬಂದಿಯನ್ನು ಸಾಗಿಸಲು ಬಸ್ಸು, ಎತ್ತಿನ ಬಂಡಿ ಹಾಗೂ ದೋಣಿಗಳ ವ್ಯವಸ್ಥೆ ಮಾಡಲಾಗಿದ್ದರೂ ಗುಡ್ಡಗಾಡು ಪ್ರದೇಶಗಳಿಗೆ ನೇಮಕಗೊಂಡ ಸಿಬ್ಬಂದಿ ಕಾಲ್ನಡಿಗೆಯಲ್ಲೇ ಸಾಗಿ ಕರ್ತವ್ಯ ನಿರ್ವಹಿಸಬೇಕಾಗಿದೆ.

ಮುಖ್ಯಮಂತ್ರಿ ತರುಣ್ ಗೊಗೊಯ್ ಸೇರಿದಂತೆ 485 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಈ ಚುನಾವಣೆಯಲ್ಲಿ ನಿರ್ಧಾರವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.