ADVERTISEMENT

ಆಂಧ್ರ ಪರ ಸಾಳ್ವೆ,ಪರಾಶರನ್ ವಾದ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2011, 19:30 IST
Last Updated 19 ಮಾರ್ಚ್ 2011, 19:30 IST

ಹೈದರಾಬಾದ್ (ಪಿಟಿಐ): ಕೃಷ್ಣಾ ಜಲವಿವಾದ ನ್ಯಾಯ ಮಂಡಳಿಯ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಆಂಧ್ರಪ್ರದೇಶ ಸರ್ಕಾರದ ಪರವಾಗಿ ಹಿರಿಯ ನ್ಯಾಯವಾದಿಗಳಾದ ಹರೀಶ್ ಸಾಳ್ವೆ, ಕೆ.ಪರಾಶರನ್ ಮತ್ತು ಜಿ. ಉಮಾಪತಿ ಅವರು ವಾದಿಸಲಿದ್ದಾರೆ.

ಮಹಾರಾಷ್ಟ್ರ, ಕರ್ನಾಟಕ ಮತ್ತು ಆಂಧ್ರಪ್ರದೇಶದ ಮಧ್ಯೆ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಳೆದ ಡಿಸೆಂಬರ್ 30ರಂದು ನ್ಯಾಯಮಂಡಳಿ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ    ಸಲ್ಲಿಸಲು ಆಂಧ್ರಪ್ರದೇಶ ಸರ್ಕಾರ ನಿರ್ಧರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.