ADVERTISEMENT

ಆಂಧ್ರ ಸಿ.ಎಂ ದೆಹಲಿಗೆ ದೌಡು

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2012, 19:59 IST
Last Updated 22 ಡಿಸೆಂಬರ್ 2012, 19:59 IST

ಹೈದರಾಬಾದ್ (ಐಎಎನ್‌ಎಸ್): ಆಂಧ್ರ ಸರ್ಕಾರದಲ್ಲಿನ ನಾಯಕತ್ವ ಬದಲಾವಣೆ ಸಾಧ್ಯತೆ ಕುರಿತು ಎದ್ದಿರುವ ಊಹಾಪೋಹಗಳ ನಡುವೆ ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ಮುಖ್ಯಮಂತ್ರಿ ಎನ್.ಕಿರಣ್ ಕುಮಾರ್ ರೆಡ್ಡಿ ಶನಿವಾರ ದಿಢೀರನೆ ದೆಹಲಿಯತ್ತ ದೌಡಾಯಿಸಿದರು.

ಪೂರ್ವ ನಿರ್ಧರಿತ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ ಮುಖ್ಯಮಂತ್ರಿಯವರು ರಾಜಧಾನಿಗೆ ಪ್ರಯಾಣ ಬೆಳೆಸಿದರು. ಇದೇ ವಿಷಯ ಕುರಿತು ಚರ್ಚಿಸಲು ಪಕ್ಷದ ಮುಖ್ಯಸ್ಥ ಬಿ.ಸತ್ಯನಾರಾಯಣ ಮತ್ತು ರಾಜ್ಯಪಾಲ ಇ.ಎಸ್.ಎಲ್.ನರಸಿಂಹನ್ ರಾಜಧಾನಿ ತಲುಪಿದ್ದಾರೆ. ಈ ನಾಯಕರು  ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗುವ ಸಾಧ್ಯತೆ ಇದೆ.

ಜಡ್ಜ್‌ಗಳ ನೇಮಕ
ನವದೆಹಲಿ
: ಒಡಿಶಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಗೋಪಾಲಗೌಡ, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಕ್ರಮ್‌ಜಿತ್ ಸೇನ್ ಮತ್ತು ಮದ್ರಾರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಯೂಸುಫ್ ಇಕ್ಬಾಲ್ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT