ADVERTISEMENT

ಆತ್ಮಹತ್ಯೆ : ಗುರುತು ಬಹಿರಂಗಪಡಿಸುವಂತಿಲ್ಲ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2011, 19:30 IST
Last Updated 12 ಏಪ್ರಿಲ್ 2011, 19:30 IST

ನವದೆಹಲಿ (ಪಿಟಿಐ): ಆತ್ಮಹತ್ಯೆಗೆ ಒಳಗಾದ ವ್ಯಕ್ತಿಯ ಗುರುತನ್ನು ಬಹಿರಂಗಪಡಿಸುವಂತಿಲ್ಲ ಎಂದು ಕೇಂದ್ರ ಮಾಹಿತಿ ಆಯೋಗ (ಸಿಐಸಿ) ಹೇಳಿದೆ.

ಭಾಭಾ ಅಣು ಸಂಶೋಧನಾ ಕೇಂದ್ರದ (ಬಿಎಆರ್‌ಸಿ) ವಿರುದ್ಧ ಮಾಹಿತಿ ಹಕ್ಕು ಕಾರ್ಯಕರ್ತರೊಬ್ಬರು ಆತ್ಮಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾಹಿತಿ ನಿರಾಕರಣೆಯ ಕುರಿತು ದೂರು ನೀಡಿದ್ದರು. ಇದರ ವಿಚಾರಣೆ ನಡೆಸಿದ ಸಿಐಸಿ, ಆತ್ಮಹತ್ಯೆಗೆ ಶರಣಾದ ವ್ಯಕ್ತಿಯ ಕುಟುಂಬ ಗೌರವಾನ್ವಿತ ಜೀವನದ ಹಕ್ಕು ಹೊಂದಿರುವುದರಿಂದ ಮತ್ತು ಅದು ವೈಯಕ್ತಿಕ ಮಾಹಿತಿಯಾಗಿರುವುದರಿಂದ ಅಂತಹ ವ್ಯಕ್ತಿಯ ಗುರುತು ಮತ್ತು ಮಾಹಿತಿಯನ್ನು ಬಹಿರಂಗಪಡಿಸುವುದು ಸರಿಯಲ್ಲ ಎಂದು ಹೇಳುವ ಮೂಲಕ ಬಿಎಆರ್‌ಸಿಯ ನಿಲುವನ್ನು ಎತ್ತಿಹಿಡಿಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT