ADVERTISEMENT

ಆತ್ಮಹತ್ಯೆ ಯತ್ನ: ಹೊಸ ವ್ಯಾಖ್ಯಾನಕ್ಕೆ ಕೇಂದ್ರ ಚಿಂತನೆ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2011, 19:30 IST
Last Updated 22 ಸೆಪ್ಟೆಂಬರ್ 2011, 19:30 IST

ನವದೆಹಲಿ (ಪಿಟಿಐ): ಆತ್ಮಹತ್ಯೆ ಯತ್ನವನ್ನು ಶಿಕ್ಷಾರ್ಹ ಅಪರಾಧದ ವ್ಯಾಪ್ತಿಯಿಂದ ತೆಗೆದುಹಾಕಲು ಚಿಂತನೆ ನಡೆಸಿರುವುದಾಗಿ ಕೇಂದ್ರ ಸರ್ಕಾರ ಗುರುವಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. 

ಈಗಾಗಲೇ ದೇಶದ 29 ರಾಜ್ಯಗಳ ಪೈಕಿ 25 ರಾಜ್ಯಗಳು ಈ ನಿಲುವಿಗೆ ಬೆಂಬಲ ಸೂಚಿಸಿವೆ. ಆತ್ಮಹತ್ಯೆ ಯತ್ನವನ್ನು ಅಪರಾಧ ಎಂದು ಪರಿಗಣಿಸುವ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 309ನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರ ಹಾಗೂ ನ್ಯಾಯಮೂರ್ತಿ ಸಂಜೀವ್ ಖನ್ನ ಅವರಿದ್ದ ಪೀಠ ಮಾನ್ಯ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.