ADVERTISEMENT

‘ಆಧಾರ್‌ ಜೋಡಣೆ ಕಡ್ಡಾಯ ಎಂದಿಲ್ಲ’

ಪಿಟಿಐ
Published 25 ಏಪ್ರಿಲ್ 2018, 19:30 IST
Last Updated 25 ಏಪ್ರಿಲ್ 2018, 19:30 IST

ನವದೆಹಲಿ: ಮೊಬೈಲ್‌ ಸಂಖ್ಯೆಗೆ ಆಧಾರ್‌ ಜೋಡಣೆ ಕಡ್ಡಾಯಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಬುಧವಾರ ಪ್ರಶ್ನಿಸಿದೆ.

‘ಮೊಬೈಲ್‌ ಸಂಖ್ಯೆಗೆ ಆಧಾರ್‌ ಜೋಡಣೆ ಕಡ್ಡಾಯ ಎಂದು ಯಾವತ್ತೂ ಹೇಳಿಲ್ಲ’ ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ಪೀಠ ಸ್ಪಷ್ಟಪಡಿಸಿದೆ.

ರಾಷ್ಟ್ರೀಯ ಹಿತಾಸಕ್ತಿ ದೃಷ್ಟಿಯಿಂದ ಮೊಬೈಲ್‌ ಬಳಕೆದಾರರ ಪರಿಶೀಲನೆ ಅಗತ್ಯ ಎಂದು ಹೇಳಿರುವುದನ್ನೇ ಸರ್ಕಾರ ಅಸ್ತ್ರದಂತೆ ಬಳಸಿಕೊಳ್ಳುತ್ತಿದೆ ಎಂದು ಪೀಠವು ತರಾಟೆಗೆ ತೆಗೆದುಕೊಂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.