ADVERTISEMENT

‘ಆಧಾರ್’ ವಿಚಾರಣೆ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠಕ್ಕೆ

ಏಜೆನ್ಸೀಸ್
Published 12 ಜುಲೈ 2017, 7:03 IST
Last Updated 12 ಜುಲೈ 2017, 7:03 IST
-ಸಾಂದರ್ಭಿಕ ಚಿತ್ರ
-ಸಾಂದರ್ಭಿಕ ಚಿತ್ರ   

ನವದೆಹಲಿ: ಆಧಾರ್‌ಗೆ ಸಂಬಂಧಿಸಿದ ದೂರುಗಳ ವಿಚಾರಣೆಯು ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠದಲ್ಲಿ ಜುಲೈ 18 ಮತ್ತು 19ರಂದು ವಿಚಾರಣೆಗೆ ಬರಲಿದೆ ಎಂದು ಸುಪ್ರೀಂ ಕೋರ್ಟ್‌ ಬುಧವಾರ ಹೇಳಿದೆ.

ಸರ್ಕಾರದ ವಿವಿಧ ಯೋಜನೆಗಳಿಗೆ ಆಧಾರ್‌ ಕಡ್ಡಾಯಗೊಳಿಸಿರುವುದನ್ನು ಪ್ರಶ್ನಿಸಿರುವ ಅರ್ಜಿದಾರರ ಪರ ವಕೀಲ ಶ್ಯಾಮ್‌ ದಿವಾನ್‌ ಮತ್ತು ಅಟಾರ್ನಿ ಜನರಲ್‌ ಕೆ.ಕೆ. ವೇಣುಗೋಪಾಲ್‌ ಅವರು ಆಧಾರ್‌ಗೆ ಸಂಬಂಧಿಸಿದ ದೂರುಗಳನ್ನು ಐದು ಮಂದಿ ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಲು ಸಮ್ಮತಿಸಿದರು.

‘ಈ ಪ್ರಕರಣದ ವಿಚಾರಣೆಯನ್ನು ಏಳು ಮಂದಿ ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠದಲ್ಲಿ ನಡೆಸಬೇಕೆ?’ ಎಂದು ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೇಹರ್‌ ಅವರು ಶ್ಯಾಮ್‌ ದಿವಾನ್‌ ಮತ್ತು ಕೆ.ಕೆ. ವೇಣುಗೋಪಾಲ್‌ ಅವರನ್ನು ಕೇಳಿದ್ದರು.

ಆದರೆ, ಐದು ಮಂದಿ ನ್ಯಾಯಮೂರ್ತಿಗಳ ಪೀಠದಲ್ಲಿ ವಿಚಾರಣೆ ನಡೆಯಲು ಶ್ಯಾಮ್‌ ದಿವಾನ್‌ ಮತ್ತು ಕೆ.ಕೆ. ವೇಣುಗೋಪಾಲ್‌ ಒಪ್ಪಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.