ನವದೆಹಲಿ: ಗುಜರಾತ್ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್ ಅವರ ರಾಜೀನಾಮೆಯನ್ನು ಬಿಜೆಪಿ ಸಂಸದೀಯ ಮಂಡಳಿ ಅಂಗೀಕರಿಸಿದೆ ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ.
ಬುಧವಾರ ನಡೆದ ಸಂಸದೀಯ ಮಂಡಳಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವೆಂಕಯ್ಯ ನಾಯ್ಡು, ಪಕ್ಷವು ರಾಷ್ಟ್ರಮಟ್ಟದಲ್ಲಿ ಷಾ ಅವರ ಸೇವೆಯನ್ನು ಬಯಸುತ್ತಿದೆ. ಷಾ ಅವರನ್ನು ಗುಜರಾತ್ ಮುಖ್ಯಮಂತ್ರಿಯಾಗಿ ನೇಮಿಸುವ ಸಂಬಂಧ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಹೇಳಿದರು.
ಗುಜರಾತ್‌ನಲ್ಲಿ ಗುರುವಾರ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿತಿನ್ ಗಡ್ಕರಿ ಮತ್ತು ಸರೋಜ್ ಪಾಂಡೆ ಅವರ ನೇತೃತ್ವದ ನಿಯೋಗವು ಭಾಗವಹಿಸಲಿದೆ. ಷಾ ಅವರು ಈ ವೇಳೆ ಹಾಜರಿರುತ್ತಾರೆ. ಅವರ ಮುಂದೆಯೇ ಮುಖ್ಯಮಂತ್ರಿ ಆಯ್ಕೆ ನಡೆಯಲಿದೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.