ADVERTISEMENT

ಆಮ್‌ ಆದ್ಮಿಗೆ ಕಾಲಾವಕಾಶ: ಶಿಂಧೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2013, 19:30 IST
Last Updated 19 ಡಿಸೆಂಬರ್ 2013, 19:30 IST

ನವದೆಹಲಿ (ಪಿಟಿಐ): ‘ಆಮ್‌ ಆದ್ಮಿ’ ಪಕ್ಷಕ್ಕೆ (ಎಎಪಿ) ನವದೆಹಲಿಯಲ್ಲಿ ಸರ್ಕಾರ ರಚಿಸಲು ಇನ್ನು ಕೆಲವು ದಿನಗಳ ಕಾಲಾವಕಾಶ ನೀಡಲಾಗುವುದು ಎಂದು ಕೇಂದ್ರ ಗೃಹಸಚಿವ ಸುಶೀಲ್‌ಕುಮಾರ್‌ ಶಿಂಧೆ ಹೇಳಿದ್ದಾರೆ. ಅತಂತ್ರ ವಿಧಾನಸಭೆಯಿಂದಾಗಿ ನವ­ದೆಹಲಿಯಲ್ಲಿ ರಾಜಕೀಯ ಅನಿಶ್ಚಿತತೆ ತಲೆದೋರಿದೆ.
ಸರ್ಕಾರ ರಚನೆಗೆ ಎಎಪಿ ಎಷ್ಟು ದಿನಗಳ ಅವಕಾಶ ಕೋರಿದೆ ಎಂದು ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ಅವ­ರನ್ನು ಕೇಳಲಾಗಿದೆ ಎಂದು ಶಿಂಧೆ ಅವರು ಗುರುವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.