ADVERTISEMENT

ಆರೋಗ್ಯ ಕಾರ್ಯಕರ್ತರ ಕೊರತೆ: ಮಕ್ಕಳ ಜೀವಕ್ಕೆ ಅಪಾಯ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2011, 19:30 IST
Last Updated 20 ಸೆಪ್ಟೆಂಬರ್ 2011, 19:30 IST

ನವದೆಹಲಿ, (ಪಿಟಿಐ): ದೇಶದಲ್ಲಿ 26 ಲಕ್ಷಕ್ಕೂ ಹೆಚ್ಚು ಆರೋಗ್ಯ ಕಾರ್ಯಕರ್ತರ ಕೊರತೆ ಕಂಡುಬಂದಿದ್ದು, ಇದರಿಂದಾಗಿ ಐದು ವರ್ಷ ಪೂರ್ಣಗೊಳಿಸುವುದರ ಒಳಗಾಗಿ ಸಾಯುವ ಮಕ್ಕಳ ಸಂಖ್ಯೆ ಐದು ಪಟ್ಟು ಹೆಚ್ಚಾಗಿದೆ ಎಂದು ಹೊಸ ಅಧ್ಯಯನವೊಂದು ತಿಳಿಸಿದೆ.

ಸುಲಭವಾಗಿ ಚಿಕಿತ್ಸೆ ನೀಡಬಹುದಾದ ನ್ಯುಮೋನಿಯ ಮತ್ತು ಅತಿಸಾರಕ್ಕೆ ಹೆಚ್ಚು ಮಕ್ಕಳು ತುತ್ತಾಗುತ್ತಿದ್ದಾರೆ. ತರಬೇತಿ ಪಡೆದ ಆರೋಗ್ಯ ಕಾರ್ಯಕರ್ತರ ಕೊರತೆಯೇ ಇದಕ್ಕೆ ಕಾರಣ ಎಂದು ಅಂತರ ರಾಷ್ಟ್ರೀಯ ಸರ್ಕಾರೇತರ ಸಂಸ್ಥೆಯಾದ `ಸೇವ್ ದಿ ಚಿಲ್ಡ್ರನ್~ ವರದಿ ತಿಳಿಸಿದೆ.

49 ಅಭಿವೃದ್ಧಿಶೀಲ ದೇಶಗಳಲ್ಲಿ 35 ಲಕ್ಷಕ್ಕೂ ಹೆಚ್ಚು ಆರೋಗ್ಯ ಕಾರ್ಯಕರ್ತರ ನೇಮಕಾತಿಗಾಗಿ ಹಣ ಸಂಗ್ರಹಿಸಲು ವಿಶ್ವಸಂಸ್ಥೆಯ ಮಹಾಸಭೆಯ ಅಧಿವೇಶನದ ಸಮಯದಲ್ಲಿ ಒತ್ತು ನೀಡಿದ ವೇಳೆಯಲ್ಲಿಯೇ ಈ ಹೊಸ ಅಧ್ಯಯನ ವರದಿ ಬಹಿರಂಗಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.