ADVERTISEMENT

ಆರೋಪಪಟ್ಟಿ ವಿಳಂಬ

​ಪ್ರಜಾವಾಣಿ ವಾರ್ತೆ
Published 1 ಜುಲೈ 2013, 19:59 IST
Last Updated 1 ಜುಲೈ 2013, 19:59 IST

ನವದೆಹಲಿ (ಪಿಟಿಐ): ಲಂಚ ಪ್ರಕರಣ ಸಂಬಂಧ ರೈಲ್ವೆ ಮಂಡಳಿ ಸದಸ್ಯರ ವಿರುದ್ಧದ ವಿಚಾರಣೆಗೆ ರೈಲ್ವೆ ಸಚಿವಾಲಯ ಅನುಮತಿ ನೀಡಬೇಕಿರುವ ಹಿನ್ನೆಲೆಯಲ್ಲಿ ಜುಲೈ 3ರ ನಿಗದಿತ ಅವಧಿಯೊಳಗೆ ಸಿಬಿಐ ಆರೋಪ ಪಟ್ಟಿ ಸಲ್ಲಿಸುವುದು ಅಸಾಧ್ಯ ಎಂದು ಮೂಲಗಳು ತಿಳಿಸಿವೆ.

ಇಲಾಖೆಯಲ್ಲಿ ನಡೆದ ಲಂಚ ಪ್ರಕರಣದಲ್ಲಿ ಮಾಜಿ ರೈಲ್ವೆ ಸಚಿವ ಪವನ್ ಕುಮಾರ್ ಬನ್ಸಲ್ ಅವರ ಅಳಿಯ ವಿಜಯ ಸಿಂಗ್ಲ ಮತ್ತು ಇತರರನ್ನು ಸಿಬಿಐ ಬಂಧಿಸಿತ್ತು. ಬಳಿಕ ಬನ್ಸಲ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.