ADVERTISEMENT

ಆರೋಪ ಪ್ರಶ್ನಿಸಿ ಹೈಕೋರ್ಟ್‌ಗೆ ಬೆಹುರಾ ಅರ್ಜಿ

​ಪ್ರಜಾವಾಣಿ ವಾರ್ತೆ
Published 20 ಜನವರಿ 2012, 19:35 IST
Last Updated 20 ಜನವರಿ 2012, 19:35 IST

ನವದೆಹಲಿ (ಪಿಟಿಐ): ಮಾಜಿ ದೂರಸಂಪರ್ಕ ಕಾರ್ಯದರ್ಶಿ ಸಿದ್ಧಾರ್ಥ ಬೆಹುರಾ ಅವರು 2ಜಿ ಸ್ಪೆಕ್ಟ್ರಂ ಹಂಚಿಕೆ ಹಗರಣದಲ್ಲಿ ತಮ್ಮ ವಿರುದ್ಧ ಆರೋಪ ಹೊರಿಸಿರುವುದನ್ನು ಪ್ರಶ್ನಿಸಿ ಶುಕ್ರವಾರ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ ನ್ಯಾಯಮೂರ್ತಿ ಎಂ.ಎಲ್. ಮೆಹ್ತಾ ಅವರು, ಮಾರ್ಚ್ 13ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಿಬಿಐಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದರು.

ಬೆಹುರಾ ಪರ ವಕೀಲ ಅಮನ್ ಲೇಖಿ, ವಾದ ಮಂಡಿಸಲು ಮುಂದಾದಾಗ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ, ಇದೇ ಪ್ರಕರಣದ ಇತರ ಆರೋಪಿಗಳು ಸಲ್ಲಿಸಿದ ಅರ್ಜಿಗಳ ವಿಚಾರಣೆ ಮಾರ್ಚ್ 12 ಮತ್ತು 13ರಂದು ನಡೆಯುತ್ತಿದ್ದು, ಆಗಲೇ ಈ ಅರ್ಜಿಯನ್ನೂ ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದರು. 

ಕಳೆದ ವರ್ಷದ ಫೆಬ್ರುವರಿ 2ರಂದು ಬಂಧಿತರಾದ ಬೆಹುರಾ ಆಗಿನಿಂದಲೂ ಮಾಜಿ ದೂರಸಂಪರ್ಕ ಸಚಿವ ಎ. ರಾಜಾ ಅವರೊಂದಿಗೆ ಸೆರೆವಾಸ ಅನುಭವಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT