ADVERTISEMENT

ಆರ್ಥಿಕ ಸಂಕಷ್ಟ: ಸಚಿವರಿಂದ ಪ್ರಧಾನಿ ಭೇಟಿ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2012, 19:30 IST
Last Updated 13 ಮಾರ್ಚ್ 2012, 19:30 IST

ನವದೆಹಲಿ (ಪಿಟಿಐ): ತೀವ್ರ ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ಕಿಂಗ್‌ಫಿಷರ್ ವಿಮಾನಯಾನ ಕಂಪೆನಿ ಮತ್ತು ಇತರ ವಿಮಾನಯಾನ ಸಂಸ್ಥೆಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ನಾಗರಿಕ ವಿಮಾನಯಾನ ಇಲಾಖೆ ಸಚಿವ ಅಜಿತ್ ಸಿಂಗ್ ಅವರು ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಮಂಗಳವಾರ ಭೇಟಿ ಮಾಡಿ ಚರ್ಚಿಸಿದ್ದಾರೆ.

ಪ್ರಧಾನಿ ಅವರೊಂದಿಗೆ ನಡೆದ ಚರ್ಚೆಯ ವಿವರವನ್ನು ತಿಳಿಸಲು ನಿರಾಕರಿಸಿದ ಅಜಿತ್ ಸಿಂಗ್, `ನಾವು ಅನೇಕ ವಿಚಾರಗಳ ಕುರಿತು ಚರ್ಚೆ ನಡೆಸಿದ್ದೇವೆ~ ಎಂದಷ್ಟೇ ಸುದ್ದಿಗಾರರಿಗೆ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.