ADVERTISEMENT

ಆಸ್ತಿ ಜಪ್ತಿ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2012, 19:30 IST
Last Updated 13 ಮಾರ್ಚ್ 2012, 19:30 IST

ನವದೆಹಲಿ (ಐಎನ್‌ಎಸ್): ಮಹಾರಾಷ್ಟ್ರದ ಕಾಂಗ್ರೆಸ್ ಮುಖಂಡ ಕೃಪಾಶಂಕರ್ ಸಿಂಗ್ ಮತ್ತು ಅವರ ಕುಟುಂಬ ಸದಸ್ಯರಿಗೆ ಸೇರಿದ ಚರ ಹಾಗೂ ಸ್ಥಿರ ಆಸ್ತಿಯನ್ನು ಜಪ್ತಿ ಮಾಡುವಂತೆ ಬಾಂಬೆ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದೆ.

ಜಪ್ತಿಗೆ ಆದೇಶಿಸಲಾಗಿದ್ದ ಯಾವುದೇ ರೀತಿಯ ಆಸ್ತಿಯನ್ನು ವರ್ಗಾವಣೆ ಇಲ್ಲವೆ ಮಾರಾಟ ಮಾಡುವುದಿಲ್ಲ ಎಂದು ಮೂರು ದಿವಸದೊಳಗೆ ಪ್ರಮಾಣ ಪತ್ರ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಕೃಪಾಶಂಕರ್ ಸಿಂಗ್ ಮತ್ತು ಅವರ ಕುಟುಂಬದವರಿಗೆ ಸೂಚಿಸಿದೆ.

ಕೃಪಾಶಂಕರ್ ಸಿಂಗ್ ಘೋಷಿತ ಆದಾಯಕ್ಕಿಂತಲೂ ಹೆಚ್ಚು ಆಸ್ತಿ ಹೊಂದಿದ್ದಾರೆ ಎಂಬ ಆರೋಪದ ಪ್ರಕರಣ ಇದಾಗಿದೆ. 

ADVERTISEMENT

ಈ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಮುಂಬೈ ಪೊಲೀಸ್ ಕಮಿಷನರ್ ಅನುಪ್ ಪಟ್ನಾಯಕ್ ಅವರಿಗೆ ಹೈಕೋರ್ಟ್ ನೀಡಿರುವ ನಿರ್ದೇಶನವನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಎಚ್.ಎಲ್. ದತ್ತು ನೇತೃತ್ವದ ಪೀಠ ಎತ್ತಿಹಿಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.