ADVERTISEMENT

ಆಹಾರ ಭದ್ರತಾ ಮಸೂದೆಗೆ ವಿರೋಧವಿಲ್ಲ : ರಾಜನಾಥ್

​ಪ್ರಜಾವಾಣಿ ವಾರ್ತೆ
Published 6 ಜುಲೈ 2013, 11:32 IST
Last Updated 6 ಜುಲೈ 2013, 11:32 IST

ನಾಗ್ಪುರ (ಪಿಟಿಯ) : `ಆಹಾರ ಭದ್ರತಾ ಮಸೂದೆಗೆ ನಮ್ಮ ವಿರೋಧವಿಲ್ಲ. ಆದರೆ ಮುಂಗಾರು ಅಧಿವೇಶನದ ವೇಳೆ ಮಸೂದೆಯಲ್ಲಿ ಕೆಲವು ತಿದ್ದುಪಡಿ ಬಯಸುತ್ತೇವಷ್ಟೆ' ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ರಾಜನಾಥ ಸಿಂಗ್ ಶನಿವಾರ ಸ್ಪಷ್ಟಪಡಿಸಿದರು.

ಆರ್‌ಎಸ್‌ಎಸ್ ಮುಖ್ಯ ಕಚೇರಿಯಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್‌ಭಾಗವತ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಗ್ರೀವಾಜ್ಞೆ ಮೂಲಕ ಮಸೂದೆ ಜಾರಿಗೆ ನಿರ್ಧರಿಸಿದ ಸಂಪುಟ ಸಭೆಯ ಕ್ರಮವನ್ನು ಪ್ರಜಾಪ್ರಭುತ್ವದ ಮೇಲಿನ `ಕ್ರೂರ ಹಾಸ್ಯ' ಎಂದು ಬಣ್ಣಿಸಿದರು.

ಇನ್ನೇನು ಕೆಲವೇ ದಿನಗಳಲ್ಲಿ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಅದಕ್ಕೂ ಮುಂಚಿತವಾಗಿ ಮಸೂದೆ ಜಾರಿಗೆ ಸುಗ್ರೀವಾಜ್ಞೆ ಹೊರಡಿಸುವ ಆತುರವಾದರೂ ಏನಿತ್ತು ಎಂದು ಪ್ರಶ್ನಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.