ನವದೆಹಲಿ (ಪಿಟಿಐ): ಆಹಾರ ಭದ್ರತಾ ಮಸೂದೆಗಾಗಿಯೇ ವಿಶೇಷ ಅಧಿವೇಶನ ನಡೆಸಬೇಕೆಂಬ ಮಾತುಗಳು ಕೇಳಿಬರುತ್ತಿರುವುದರ ಮಧ್ಯೆಯೇ ಮಸೂದೆ ವಿಚಾರದಲ್ಲಿ ಎಲ್ಲಾ ಅವಕಾಶಗಳನ್ನು ಮುಕ್ತವಾಗಿರಿಸಿಕೊಂಡಿರುವುದಾಗಿ ಕೇಂದ್ರ ಸರ್ಕಾರ ಸೋಮವಾರ ಇಲ್ಲಿ ಹೇಳಿದೆ.
ಮಸೂದೆ ಬಗ್ಗೆ ಪ್ರಮುಖ ಮಿತ್ರ ಪಕ್ಷಗಳ ಅಭಿಪ್ರಾಯ ಪಡೆಯಲು ಕಾಂಗ್ರೆಸ್ ಯುಪಿಎ ಸಮನ್ವಯ ಸಮಿತಿ ಸಭೆ ಕರೆದಿತ್ತು. ಸಭೆಯ ನಂತರದಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಕಮಲ್‌ನಾಥ್ ಈ ಹೇಳಿಕೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.