ADVERTISEMENT

ಆಹಾರ ಭದ್ರತೆಗೆ ವಿರೋಧವಿಲ್ಲ: ಬಿಜೆಪಿ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 6 ಜುಲೈ 2013, 19:59 IST
Last Updated 6 ಜುಲೈ 2013, 19:59 IST

ನಾಗಪುರ (ಪಿಟಿಐ): ಸುಗ್ರೀವಾಜ್ಞೆ ಮೂಲಕ ಆಹಾರ ಭದ್ರತಾ ಮಸೂದೆ ಜಾರಿಗೆ ತರಲು ಹೊರಟಿರುವ ಕೇಂದ್ರ ಯುಪಿಎ ಸರ್ಕಾರದ ಕ್ರಮವನ್ನು `ಪ್ರಜಾತಂತ್ರದ ಅತಿ ಕೆಟ್ಟ ಕುಚೋದ್ಯ' ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ ಸಿಂಗ್ ಗೇಲಿ ಮಾಡಿದ್ದಾರೆ.

ಆಹಾರ ಭದ್ರತಾ ಮಸೂದೆ ಕಾಂಗ್ರೆಸ್‌ನ ರಾಜಕೀಯ ನಾಟಕ ಎಂದು ಟೀಕಿಸಿದ ಅವರು, ತಮ್ಮ ಪಕ್ಷ ಈ ಮಸೂದೆಯನ್ನು ವಿರೋಧಿಸುವುದಿಲ್ಲ. ಆದರೆ, ಕೆಲವು ಮಾರ್ಪಾಡುಗಳನ್ನು ಮಾಡುವ ಸಲಹೆ ಮುಂದಿಟ್ಟಿದೆ ಎಂದರು.

ಬಿಜೆಪಿ ಹಿರಿಯ ನಾಯಕರಾದ ಎಲ್.ಕೆ. ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿ ಭೇಟಿಯ ಬೆನ್ನಲ್ಲೇ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಭೇಟಿ ಮಾಡಿದ ಇದೊಂದು ಸಹಜ ಮತ್ತು ಸೌಜನ್ಯದ ಭೇಟಿಯಾಗಿದ್ದು, ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.