ADVERTISEMENT

ಆಹಾರ ಭದ್ರತೆ: ಇಂದು ನಿರ್ಧಾರ

​ಪ್ರಜಾವಾಣಿ ವಾರ್ತೆ
Published 12 ಜೂನ್ 2013, 19:59 IST
Last Updated 12 ಜೂನ್ 2013, 19:59 IST

ನವದೆಹಲಿ (ಐಎಎನ್‌ಎಸ್): ಸೋನಿಯಾ ಗಾಂಧಿ ಅವರಿಗೆ ಪ್ರಿಯವಾಗಿರುವ ರಾಷ್ಟ್ರೀಯ ಆಹಾರ ಭದ್ರತಾ ಮಸೂದೆಗೆ ಸಂಸತ್ತಿನ ಒಪ್ಪಿಗೆ ಬೇಕಾಗಿದೆ. ಆದರೆ, ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ ಮಸೂದೆ ಜಾರಿಗೆ ಮುಂದಾಗಿದೆ.

`ರಾಷ್ಟ್ರೀಯ ಆಹಾರ ಭದ್ರತಾ ಮಸೂದೆ ಜಾರಿಗೆ ಸುಗ್ರೀವಾಜ್ಞೆ ಹೊರಡಿಸುವ ಸಂಬಂಧ ಗುರುವಾರ ನಡೆಯಲಿರುವ ಕೇಂದ್ರ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು' ಎಂದು ಆಹಾರ ಸಚಿವ ಕೆ.ವಿ. ಥಾಮಸ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.