ನವದೆಹಲಿ (ಪಿಟಿಐ): ಪ್ರಧಾನಿ ನರೇಂದ್ರ ಮೋದಿ ಅವರು ಮೂರ ರಾಷ್ಟ್ರಗಳ ಪ್ರವಾಸದ ನಿಮಿತ್ತ ಮಂಗಳವಾರ ಪ್ರಯಾಣ ಬೆಳೆಸಲಿದ್ದಾರೆ.
ಮ್ಯಾನ್ಮಾರ್, ಆಸ್ಟ್ರೇಲಿಯಾ ಮತ್ತು ಫಿಜಿ ದೇಶಗಳಿಗೆ ಒಟ್ಟು ಹತ್ತು ದಿನಗಳ ಪ್ರವಾಸ ಕೈಗೊಳ್ಳುತ್ತಿರುವ ಮೋದಿ ಅವರು, ಜಾಗತಿಕ ಆರ್ಥಿಕ ಸುಧಾರಣೆ, ಉದ್ಯೋಗ ಸೃಷ್ಟಿ ಸೇರಿದಂತೆ ನಡೆಯಲಿರುವ ವಿವಿಧ ಪ್ರಮುಖ ಜಾಗತಿಕ ಸಮ್ಮೇಳನಗಳಲ್ಲಿ ಭಾಗವಹಿಸಲಿದ್ದಾರೆ. ನ.12– 13ರಂದು ಮ್ಯಾನ್ಮಾರ್‌ನಲ್ಲಿ ನಡೆಯಲಿರುವ ಎರಡು ಸಮ್ಮೇಳನಗಳಲ್ಲಿ ಭಾಗವಹಿಸುವ ಅವರು, ಬಳಿಕ ಆಸ್ಟ್ರೇಲಿಯಾಕ್ಕೆ ತೆರಳಲಿದ್ದಾರೆ.
ಬ್ರಿಸ್ಬೇನ್‌ನಲ್ಲಿ ನ.15ರಿಂದ ನಡೆಯಲಿರುವ ಎರಡು ದಿನಗಳ ಜಿ20 ಸಮ್ಮೇಳನದ ಜತೆಯಲ್ಲಿ, ಆಸ್ಟ್ರೇಲಿಯಾ ಪ್ರಧಾನಿ ಟೋನಿ ಅಬೊಟ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ನ.19ರಂದು ಫಿಜಿಗೆ ಭೇಟಿ ನೀಡಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.