ADVERTISEMENT

ಇಗ್ನೊ: ಕಿವುಡರಿಗಾಗಿ ಪದವಿ ಕೋರ್ಸ್‌ಗಳು

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2012, 19:30 IST
Last Updated 14 ಅಕ್ಟೋಬರ್ 2012, 19:30 IST

ನವದೆಹಲಿ (ಐಎಎನ್‌ಎಸ್): ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತವಿದ್ಯಾಲಯ (ಐಜಿಎನ್‌ಒಯು-ಇಗ್ನೊ)ವು ಕಿವುಡರಿಗಾಗಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಬಿ.ಇಡಿ ಕೋರ್ಸ್‌ಗಳನ್ನು ಶೀಘ್ರದಲ್ಲಿ ಪ್ರಾರಂಭಿಸಲಿದೆ ಎಂದು ವಿವಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾರತೀಯ ಸಂಜ್ಞಾ ಭಾಷಾ ಸಂಶೋಧನೆ ಮತ್ತು ತರಬೇತಿ ಕೇಂದ್ರದ (ಐಎಸ್‌ಎಲ್‌ಆರ್‌ಟಿಸಿ) ಅಡಿಯಲ್ಲಿ ಈ ಕೋರ್ಸ್‌ಗಳು ಆರಂಭವಾಗಲಿವೆ.

ಇಗ್ನೊ ಆವರಣದಲ್ಲಿ ಭಾನುವಾರ ನಡೆದ ಸಂಜ್ಞಾ ಭಾಷಾ ಸಂಶೋಧನೆ ಮತ್ತು ತರಬೇತಿ ಕೇಂದ್ರದ ಮೊದಲ ಸಂಸ್ಥಾಪನಾ ದಿನದಂದು ಈ ಕೋರ್ಸ್ ಆರಂಭಿಸುವ ವಿಚಾರವನ್ನು ಪ್ರಕಟಿಸಲಾಗಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.