ನವದೆಹಲಿ: ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಮಲ್ ಸ್ಪಾಂಜ್ ಸ್ಟೀಲ್ ಅಂಡ್ ಪವರ್ ಲಿಮಿಟೆಡ್ನ(ಕೆಎಸ್ಎಸ್ಪಿಎಲ್) ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
ಜಾರಿ ನಿರ್ದೇಶನಾಲಯ ಹಣ ಅಕ್ರಮ ವರ್ಗಾವಣೆ ನಿಯಂತ್ರಣ ಕಾಯ್ದೆಯಡಿ(ಪಿಎಂಎಲ್ಎ) ಕಮಲ್ ಸ್ಪಾಂಜ್ ಸ್ಟೀಲ್ ಅಂಡ್ ಪವರ್ ಲಿಮಿಟೆಡ್ನ ₹32,175 ಕೋಟಿ ಮೌಲ್ಯದ ಆಸ್ತಿಯನ್ನು ಮಂಗಳವಾರ ಮಟ್ಟುಗೋಲು ಹಾಕಿಕೊಂಡಿದೆ.
ಮಧ್ಯಪ್ರದೇಶದಲ್ಲಿ ಥೆಸ್ಗೊರಾ–ಬಿ ರುದ್ರಪುರಿ ಕಲ್ಲಿದ್ದಲು ನಿಕ್ಷೇಪವನ್ನು ಕಮಲ್ ಸ್ಪಾಂಜ್ ಸ್ಟೀಲ್ ಅಂಡ್ ಪವರ್ ಲಿಮಿಟೆಡ್ಗೆ ಹಂಚಿಕೆ ಮಾಡಿದ ಪ್ರಕರಣ ಇದು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.