ADVERTISEMENT

ಇ.ಡಿ. ಎದುರು ವಿಚಾರಣೆಗೆ ಹಾಜರಾದ ತೇಜಸ್ವಿ

ಪಿಟಿಐ
Published 10 ಅಕ್ಟೋಬರ್ 2017, 19:30 IST
Last Updated 10 ಅಕ್ಟೋಬರ್ 2017, 19:30 IST
ಇ.ಡಿ. ಎದುರು ವಿಚಾರಣೆಗೆ ಹಾಜರಾದ ತೇಜಸ್ವಿ
ಇ.ಡಿ. ಎದುರು ವಿಚಾರಣೆಗೆ ಹಾಜರಾದ ತೇಜಸ್ವಿ   

ನವದೆಹಲಿ: ರೈಲು ನಿಲ್ದಾಣಗಳ ಬಳಿಯ ಹೋಟೆಲ್‌ಗಳ ಹರಾಜು ಪ್ರಕ್ರಿಯೆಯಲ್ಲಿ ಅವ್ಯವಹಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ಮುಖ್ಯಸ್ಥ ಲಾಲುಪ್ರಸಾದ್‌ ಅವರ ಪುತ್ರ ತೇಜಸ್ವಿ ಯಾದವ್ ಅವರು ಜಾರಿ ನಿರ್ದೇಶನಾಲಯದ ಮುಂದೆ ಮಂಗಳವಾರ ಹಾಜರಾದರು.

ಬಿಹಾರದ ಮಾಜಿ ಉಪಮುಖ್ಯಮಂತ್ರಿಯೂ ಆದ ತೇಜಸ್ವಿ ಅವರು ನವದೆಹಲಿಯಲ್ಲಿರುವ ಕೇಂದ್ರ ಕಚೇರಿಗೆ ಬಂದು ತಮ್ಮ ಹೇಳಿಕೆ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಸಂಬಂಧ ಜಾರಿ ನಿರ್ದೇಶನಾಲಯವು ಲಾಲು ಕುಟುಂಬದವರ ಮೇಲೆ ದೂರು ದಾಖಲಿಸಿತ್ತು.

ADVERTISEMENT

ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಸಚಿವ ಪಿ.ಸಿ ಗುಪ್ತ ಅವರನ್ನು ಈಗಾಗಲೇ ವಿಚಾರಣೆ ನಡೆಸಿದ್ದು, ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ಡಿದೇವಿ ಅವರಿಗೂ ವಿಚಾರಣೆಗೆ ಬರುವಂತೆ ಸಮನ್ಸ್ ಜಾರಿ ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಹ ದೂರು ದಾಖಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.