ADVERTISEMENT

ಇನ್ಮುಂದೆ ‘ಕಾಮಗಾರಿ ನಿಷೇಧ’ ವಲಯ

ಪಿಟಿಐ
Published 4 ಮಾರ್ಚ್ 2018, 19:30 IST
Last Updated 4 ಮಾರ್ಚ್ 2018, 19:30 IST
ಶ್ರೀನಗರ–ಜಮ್ಮು ರಾಷ್ಟ್ರೀಯ ಹೆದ್ದಾರಿ
ಶ್ರೀನಗರ–ಜಮ್ಮು ರಾಷ್ಟ್ರೀಯ ಹೆದ್ದಾರಿ   

ಶ್ರೀನಗರ: ಹಸಿರು ಪ್ರದೇಶ ರಕ್ಷಿಸುವ ಸಲುವಾಗಿ ಶ್ರೀನಗರ – ಜಮ್ಮು ನಡುವಿನ ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಗಳನ್ನು ‘ಕಾಮಗಾರಿ ನಿಷೇಧ ವಲಯ’ (ನಿರ್ಮಾಣ ರಹಿತ ವಲಯ) ಎಂದು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಘೋಷಣೆ ಮಾಡಿದೆ.

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಪಾಂಪೊರೆಯ ಕಡಾಲ್‌ಬಾಲ್‌ನಿಂದ ಮಿರ್ಜಾಪೋರಾ ತನಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾ
ರಿಯ ಎರಡೂ ಬದಿಗಳನ್ನು ಕಾಮಗಾರಿ ನಿಷೇಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾ ಅಭಿವೃದ್ಧಿ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಸುಮಾರು 300 ಕಿಮೀ ಉದ್ದದ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯ ಅಕ್ಕಪಕ್ಕದಲ್ಲಿ ಹಸಿರನ್ನು ಉಳಿಸುವ ಮತ್ತು ಗತ ವೈಭವವನ್ನು ಕಾಪಾಡುವ ಉದ್ದೇಶದಿಂದ ಈ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

ADVERTISEMENT

ನಿಯಮ ಉಲ್ಲಂಘಿಸಿ ಯಾರಾದರೂ ಕಟ್ಟಡ ನಿರ್ಮಾಣ ಮಾಡಿದರೆ ಕ್ರಮಕೈಗೊಳ್ಳಲಾಗುವುದು. ನಿರ್ಮಾಣಗೊಂಡ ಕಟ್ಟಡಗಳನ್ನು ನೆಲಸಮ ಮಾಡ
ಲಾಗುವುದು. ಪರಿಸರಕ್ಕೆ ಆಗಿರುವ ಹಾನಿಗೆ ಕಟ್ಟಡಗಳ ಮಾಲೀಕರನ್ನೇ ಹೊಣೆಗಾರರನ್ನಾಗಿ ಮಾಡುಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.