ಚೆನ್ನೈ: ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ (70) ಅವರಿಗೆ ಲಘು ಹೃದಯಾಘಾತವಾಗಿದ್ದು, ಸೋಮವಾರ ಅಪರಾಹ್ನ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎದೆ ನೋವು ಕಾಣಿಸಿಕೊಂಡಾಗ ಅವರನ್ನು ಅಪೊಲೊ ಆಸ್ಪತ್ರೆಗೆ ದಾಖಲಿಸಲಾಯಿತು.
ಆಸ್ಪತ್ರೆಯಲ್ಲಿ ಅವರಿಗೆ ಆಂಜಿಯೊಗ್ರಾಮ್ ನಡೆಸಲಾಗಿದೆ. ಆರೋಗ್ಯ ಸ್ಥಿರವಾಗಿದ್ದು ಕೆಲವು ದಿನಗಳ ವಿಶ್ರಾಂತಿ ನಂತರ ಆಸ್ಪತ್ರೆಯಿಂದ ಕಳುಹಿಸಲಾಗುವುದು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.