ADVERTISEMENT

ಇ-ಮೇಲ್ ಹುಜಿ ಕಾರ್ಯಕರ್ತ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2011, 19:00 IST
Last Updated 15 ಸೆಪ್ಟೆಂಬರ್ 2011, 19:00 IST

ಜಮ್ಮು (ಪಿಟಿಐ): ದೆಹಲಿ ಹೈಕೋರ್ಟ್ ಆವರಣದಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ಹೊಣೆ ಹೊತ್ತು ಇ-ಮೇಲ್ ಕಳುಹಿಸಿದ ಎನ್ನಲಾದ ಶಂಕಿತ ಹುಜಿ ಸಂಘಟನೆಯ ಕಾರ್ಯಕರ್ತನನ್ನು ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಯವರು ವಶಕ್ಕೆ ತೆಗೆದುಕೊಂಡಿದ್ದಾರೆ.

ತಾನು ನೀಡಿದ ನಿರ್ದೇಶನದ ಮೇಲೆ ಈ ಇ-ಮೇಲ್ ಕಳುಹಿಸಲಾಗಿತ್ತು ಎಂದು ಅಮೀರ್ ಒಪ್ಪಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಅಮೀರ್ ಜಮ್ಮು-ಕಾಶ್ಮೀರದ ಕಿಸ್ವ್ಯಾರ ಜಿಲ್ಲೆಗೆ ಸೇರಿದವನ್ನಾಗಿದ್ದು, ಹುಜಿ  ಪರ ಕಾರ್ಯನಿರ್ವಹಿಸುತ್ತಿದ್ದ. ಅಮೀರ್‌ನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಭದ್ರತಾ ಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.