ನವದೆಹಲಿ: ಕಾಂಗ್ರೆಸ್ ಪಕ್ಷವು ಲೋಕಸಭೆಯ ಸುಮಾರು 200 ಸ್ಥಾನಗಳಿಗೆ ಈ ತಿಂಗಳ ಅಂತ್ಯದೊಳಗೆ ಅಭ್ಯರ್ಥಿಗಳನ್ನು ಘೋಷಿಸಲಿದೆ.
ಸಾಮಾನ್ಯವಾಗಿ ಚುನಾವಣೆ ವೇಳಾಪಟ್ಟಿ ಪ್ರಕಟವಾದ ನಂತರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದು ರೂಢಿ. ಆದರೆ ಈ ಬಾರಿ ಮುಂಚಿತವಾಗಿಯೇ ಈ ಕೆಲಸ ಮಾಡುತ್ತಿರುವ ವಿಶೇಷ.
‘ಜನವರಿ 17ರಂದು ನಡೆಯಲಿರುವ ಎಐಸಿಸಿ ಸಮಾವೇಶದ ಬಳಿಕ ಅಭ್ಯರ್ಥಿ ಆಯ್ಕೆ ಕುರಿತು ಸಭೆ ನಡೆಯಲಿದೆ’ ಎಂದು ಪಕ್ಷದ ಹಿರಿಯ ಮುಖಂಡರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.