ADVERTISEMENT

ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಪ್ರಮಾಣ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2017, 11:08 IST
Last Updated 19 ಮಾರ್ಚ್ 2017, 11:08 IST
ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಪ್ರಮಾಣ
ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಪ್ರಮಾಣ   

ಲಖನೌ:  ಹಿಂದುತ್ವದ ಪ್ರತಿಪಾದಕ ಯೋಗಿ ಆದಿತ್ಯನಾಥ್ ಅವರು ಇಂದು ಮಧ್ಯಾಹ್ನ  ಉತ್ತರ ಪ್ರದೇಶದ 21ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಮಧ್ಯಾಹ್ನ  2.15ಕ್ಕೆ ಲಖನೌದ ಸ್ಮೃತಿ ಉಪವನ್‍ನಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಹಿರಿಯರು ಭಾಗಿಯಾಗಿದ್ದರು.

ಕೇಶವ್ ಪ್ರಸಾದ್ ಮೌರ್ಯ ಮತ್ತು ದಿನೇಶ್ ಶರ್ಮಾ ಅವರು ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ . ಇದೇ ಮೊದಲ ಬಾರಿ ಉತ್ತರ ಪ್ರದೇಶದಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ನೇಮಕ ಮಾಡಲಾಗಿದೆ, ಬಲ್ಲಮೂಲಗಳ ಪ್ರಕಾರ ಮೌರ್ಯ ಅವರಿಗೆ ಗೃಹ ಖಾತೆಯ ಜವಾಬ್ದಾರಿಯನ್ನು ನೀಡಲಾಗುವುದು.

ADVERTISEMENT

[related]

ಸೂರ್ಯ ಪ್ರತಾಪ್ ಸಾಹಿ, ಸುರೇಶ್ ಖನ್ನಾ ಮತ್ತು ಸ್ವಾಮಿ ಪ್ರಸಾದ್ ಮೌರ್ಯ ಅವರು ಸಚಿವ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ದಾರಾ ಸಿಂಗ್ ಚೌಹಾಣ್, ಧರಂ ಪಾಲ್ ಸಿಂಗ್, ಸತ್ಯದೇವ್ ಪಚೌರಿ, ರಾಮಪತಿ ಶಾಸ್ತ್ರಿ, ಜೆಪಿ ಸಿಂಗ್, ಓಂ ಪ್ರಕಾಶ್ ರಾಜ್‍ಭರ್, ಲಕ್ಷ್ಮಿ ನಾರಾಯಿನ್ ಚೌಧರಿ, ಚೇತನ್ ಚೌಹಾಣ್, ಶ್ರೀಕಾಂತ್ ಶರ್ಮಾ, ಮಾಜಿ ಕ್ರಿಕೆಟಿಗ ಮೋಹಸಿನ್ ರಾಜಾ, ನೀಲಕಾಂತ್ ತಿವಾರಿ, ಗಿರೀಶ್ ಚಂದ್ರ ಯಾದವ್ ಮತ್ತು ಬಲದೇವ್ ಔಲಾಖ್  ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.