ADVERTISEMENT

ಉತ್ತರಪ್ರದೇಶ: ಐಷಾರಾಮಿ ಹೋಟೆಲ್‌ನಲ್ಲಿ ಬೆಂಕಿ ಅವಘಡ, 4 ಸಾವು

ಏಜೆನ್ಸೀಸ್
Published 19 ಜೂನ್ 2018, 7:57 IST
Last Updated 19 ಜೂನ್ 2018, 7:57 IST
ಉತ್ತರಪ್ರದೇಶ: ಅಂತರರಾಷ್ಟ್ರೀಯ ಹೋಟೆಲ್‌ನಲ್ಲಿ ಬೆಂಕಿ ಅವಘಡ, 4 ಸಾವು
ಉತ್ತರಪ್ರದೇಶ: ಅಂತರರಾಷ್ಟ್ರೀಯ ಹೋಟೆಲ್‌ನಲ್ಲಿ ಬೆಂಕಿ ಅವಘಡ, 4 ಸಾವು   

ಲಖನೌ:ಇಲ್ಲಿನ ಚಾರ್‌ಬಾಗ್‌ನಲ್ಲಿರುವ ಎಸ್‌ಎಸ್‌ಜೆ ಐಷಾರಾಮಿ ಹೋಟೆಲ್‌ನಲ್ಲಿ ಮಂಗಳವಾರ ನಸುಕಿನ ವೇಳೆ ಬೆಂಕಿ ಅವಘಡ ಸಂಭವಿಸಿದ್ದು, ನಾಲ್ವರು ಸಾವಿಗೀಡಾಗಿದ್ದಾರೆ.

ಇದುವರೆಗೆ 50 ಜನರನ್ನು ರಕ್ಷಣೆ ಮಾಡಲಾಗಿದ್ದು, ಗಾಯಾಳುಗಳನ್ನು ಸಮೀಪದ ಅಸ್ಪತ್ರೆಗೆ ದಾಖಲಿಸಲಾಗಿದೆ.

ಹೋಟೆಲ್‌ನ ಮೊದಲ ಹಂತದ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣವೇ ಎಲ್ಲ ಮಹಡಿಗಳಿಗೂ ಬೆಂಕಿ ಆವರಿಸಿತು. ಜೊತೆಗೆ ಕಾಮಗಾರಿ ಹಂತದಲ್ಲಿದ್ದ ಕಟ್ಟಡ ಹಾಗೂ ಪಕ್ಕದ ಹೋಟೆಲ್‌ಗೂ ಬೆಂಕಿ ತಗುಲಿದ್ದು, ಎರಡು ಹೋಟೆಲ್‌ಗಳು ನಾಶವಾಗಿದೆ ಎಂದು ತಿಳಿದು ಬಂದಿದೆ.

ADVERTISEMENT

ತಕ್ಷಣವೇಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದು, ಕಾರ್ಯಾಚರಣೆ ಪ್ರಗತಿಯಲ್ಲಿದೆ.

ಹೋಟೆಲ್‌ನ ಮೊದಲ ಮಹಡಿಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ. ಐದು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಘಡದ ಕಾರಣ ತಿಳಿದು ಬಂದಿಲ್ಲ. ಈಗಾಗಲೇ ತನಿಖೆ ಆರಂಭಿಸಿದ್ದೇವೆ ಎಂದು ಲಖನೌ ಐಜಿ ಎಸ್‌. ಪಾಂಡೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.