ADVERTISEMENT

ಉತ್ತರಾಖಂಡಕ್ಕೆ ನ್ಯಾಯಮಂಡಳಿ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2013, 19:59 IST
Last Updated 26 ಸೆಪ್ಟೆಂಬರ್ 2013, 19:59 IST

ನವದೆಹಲಿ(ಪಿಟಿಐ): ‘ಪ್ರಕೃತಿ ವಿಕೋಪಕ್ಕೆ ಒಳಗಾದ ಉತ್ತರಾ­ಖಂಡದಲ್ಲಿ ಕೈಗೊಂಡ ಪರಿಹಾರ ಕ್ರಮಗಳಿಗೆ ಸಂಬಂಧಿಸಿದಂತೆ ನಮ್ಮ ಪ್ರಶ್ನೆಗಳಿಗೆ ರಾಜ್ಯ ಸರ್ಕಾರ ಉತ್ತರಿಸಬೇಕು ಇಲ್ಲವೇ ನಾವು ಹೊರಡಿಸುವ ಕಠಿಣ ಆದೇಶವನ್ನು ಎದುರಿಸಬೇಕು’ ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(ಎನ್‌ಜಿಟಿ) ಗುರುವಾರ ಎಚ್ಚರಿಕೆ ನೀಡಿದೆ.

‘ಜನರ ಕಲ್ಯಾಣ, ಪರಿಸರ ಸಮತೋಲನ ಹಾಗೂ ಮರು­ಸ್ಥಾಪನೆ, ಪ್ರಕೃತಿ ವಿಕೋಪದಂತಹ ಘಟನೆ ಮರುಕಳಿಸದಂತೆ ಕೈಗೊಂಡ ಕ್ರಮಗಳ ಕುರಿತು ಅ. 11ರಂದು ನ್ಯಾಯಮಂಡಳಿಗೆ ತಿಳಿಸಲು ರಾಜ್ಯ ಸರ್ಕಾರ ವಿಫಲವಾದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಸಂಬಂಧಿಸಿದ ಇತರ ಹಿರಿಯ ಅಧಿಕಾರಿಗಳು ಖುದ್ದಾಗಿ ಹಾಜರಾಗುವಂತೆ ನಿರ್ದೇಶನ ನೀಡಬೇಕಾಗುತ್ತದೆ’ ಎಂದು ನ್ಯಾಯಮಂಡಳಿಯ ಅಧ್ಯಕ್ಷರಾದ ನ್ಯಾಯಮೂರ್ತಿ ಸ್ವತಂತ್ರ ಕುಮಾರ್‌ ಸ್ಪಷ್ಟಪಡಿಸಿದರು.

ಉತ್ತರಾಖಂಡ ಸರ್ಕಾರದ ಪರ ನ್ಯಾಯಮಂಡಳಿ ಎದುರು ಹಾಜರಾದ ವಕೀಲರು, ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳ ಕುರಿತು ವಿವರಿಸುವಲ್ಲಿ    ವಿಫಲರಾದ ಹಿನ್ನೆಲೆಯಲ್ಲಿ ನ್ಯಾಯಮಂಡಳಿ ಮೇಲಿನಂತೆ ಖಾರವಾಗಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.