ADVERTISEMENT

ಉತ್ತರಾಖಂಡ್: ಮುಖ್ಯಮಂತ್ರಿಯಾಗಿ ತ್ರಿವೇಂದ್ರ ಸಿಂಗ್‌ ರಾವತ್‌ ಪ್ರಮಾಣ ವಚನ ಸ್ವೀಕಾರ

ಏಜೆನ್ಸೀಸ್
Published 18 ಮಾರ್ಚ್ 2017, 11:45 IST
Last Updated 18 ಮಾರ್ಚ್ 2017, 11:45 IST
ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ತ್ರಿವೀಂದ್ರ ಸಿಂಗ್‌ ರಾವತ್
ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ತ್ರಿವೀಂದ್ರ ಸಿಂಗ್‌ ರಾವತ್   

ಡೆಹ್ರಾಡೂನ್‌: ಬಿಜಿಪಿಯ ಹಿರಿಯ ನಾಯಕ ತ್ರಿವೇಂದ್ರ ಸಿಂಗ್‌ ರಾವತ್‌ ಅವರು ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನಗರದ ಪೆರೇಡ್‌ ಗ್ರೌಂಡ್‌ನಲ್ಲಿ ಮಧ್ಯಾಹ್ನ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಕೃಷ್ಟಕಾಂತ ಪೌಲ್‌ ಅವರಿಂದ ರಾಜ್ಯದ 8 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ, ಭ್ರಷ್ಟಾಚಾರ ಹಾಗೂ ಬಡತನ ಮುಕ್ತ ರಾಜ್ಯ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದರು.

2014ರ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಜಯಕ್ಕಾಗಿ ಶ್ರಮಿಸಿದ್ದ ತ್ರಿವೇಂದ್ರ ಸಿಂಗ್‌ ರಾವತ್‌ ಅವರನ್ನು ಬಿಜೆಪಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಶುಕ್ರವಾರ(17ರಂದು) ನಡೆದ ಬೆಳವಣಿಗೆಯಲ್ಲಿ ಅವಿರೋಧವಾಗಿ ಆಯ್ಕೆಮಾಡಲಾಗಿತ್ತು.

ADVERTISEMENT

ಕಾರ್ಯಕ್ರಮದಲ್ಲಿ ಬಿಜೆಪಿಯ ಹಲವು ಗಣ್ಯರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಹಾಜರಿದ್ದರು.

ವಿಧಾನ ಸಭೆ ಚುನಾವಣೆಯಲ್ಲಿ ಒಟ್ಟು 70 ಸ್ಥಾನಗಳಲ್ಲಿ 57ನ್ನು ಬಿಜೆಪಿ ಗೆದ್ದುಕೊಂಡಿತ್ತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.