ADVERTISEMENT

ಉತ್ತರ ಪ್ರದೇಶದಲ್ಲಿ ಮಳೆಗೆ 10 ಸಾವು

​ಪ್ರಜಾವಾಣಿ ವಾರ್ತೆ
Published 12 ಜುಲೈ 2017, 19:30 IST
Last Updated 12 ಜುಲೈ 2017, 19:30 IST
ನಾಗಾಲ್ಯಾಂಡ್‌ನ ದಿಮಾಪುರದಲ್ಲಿ ಕುಸಿದು ಬಿದ್ದಿರುವ ಚಾತೆ ನದಿಯ ಸೇತುವೆ ಬಳಿ ಬುಧವಾರ ಜನರು ಜಮಾಯಿಸಿದ್ದರು. ಈ ಪ್ರದೇಶದಲ್ಲಿ ನಿರಂತರ ಮಳೆಯಾದ ಪರಿಣಾಮ ಮಂಗಳವಾರ ಸೇತುವೆ ಕುಸಿದಿದ್ದು ನಾಲ್ವರು ಸಾವನ್ನಪ್ಪಿದ್ದಾರೆ, ಐವರಿಗೆ ಗಾಯವಾಗಿದೆ  –ಪಿಟಿಐ ಚಿತ್ರ

ಲಖನೌ: ಉತ್ತರ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ವಿವಿಧೆಡೆ ಮನೆಗಳು ಕುಸಿದ ಘಟನೆಯಲ್ಲಿ ಮಕ್ಕಳು, ಮಹಿಳೆ ಸೇರಿದಂತೆ ಒಟ್ಟು ಹತ್ತು ಮಂದಿ ಮೃತಪಟ್ಟಿದ್ದಾರೆ.

ರಾಜ್ಯದಾದ್ಯಂತ ಪ್ರವಾಹ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಂಡಿದ್ದು, ಪ್ರಮುಖ ನದಿಗಳ ನೀರಿನ ಮಟ್ಟದಲ್ಲಿ ಏರಿಕೆ ಕಂಡುಬಂದಿದೆ.

ಗುವಾಹಟಿ (ಪಿಟಿಐ): ಅಸ್ಸಾಂನಲ್ಲೂ ಬುಧವಾರ ಪ್ರವಾಹ ಸ್ಥಿತಿ ಉಲ್ಬಣಿಸಿದ್ದು, 5 ಮಂದಿ ಸಾವಿಗೀಡಾಗಿದ್ದಾರೆ. ಇದರಿಂದ, ಈ ಬಾರಿಯ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 44ಕ್ಕೆ ಏರಿದಂತಾಗಿದೆ. ಅತಿವೃಷ್ಟಿಯಿಂದ ರಾಜ್ಯದ 24 ಜಿಲ್ಲೆಗಳ 17.2 ಲಕ್ಷ ಮಂದಿ ತೊಂದರೆಗೆ ಒಳಗಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.