ಲಖನೌ (ಪಿಟಿಐ): ಉತ್ತರ ಪ್ರದೇಶದ ಯುವ ಮುಖ್ಯಮಂತ್ರಿ ಅಖಿಲೇಶ್ ಯಾದವ್ ತಮ್ಮ ಸಹೋದ್ಯೋಗಿ ಸಚಿವರಿಗೆ ಭಾನುವಾರ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ ಆದರೆ ಗೃಹ, ಹಣಕಾಸು ಸೇರಿದಂತೆ ಹಲವು ಪ್ರಮುಖ ಇಲಾಖೆಗಳನ್ನು ತಮ್ಮ ಬಳಿಯೇ ಇರಿಸಿಕೊಂಡಿದ್ದಾರೆ.
ಕೊಲೆ ಯತ್ನ, ಅಪಹರಣಗಳಂತಹ ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿರುವ ಪಕ್ಷೇತರ ಶಾಸಕ ರಘುರಾಜ್ ಪ್ರತಾಪ್ ಸಿಂಗ್ ಅಲಿಯಾಸ್ ರಾಜಾ ಭಯ್ಯಾ ಅವರಿಗೆ ಕಾರಾಗೃಹ ಇಲಾಖೆ ಹೊಣೆಗಾರಿಕೆ ನೀಡಲಾಗಿದೆ. ಹಿಂದಿನ ಮುಖ್ಯಮಂತ್ರಿ ಮಾಯಾವತಿ ಅವರು ರಾಜಾ ಭಯ್ಯಾ ಅವರನ್ನು ಜೈಲಿಗೆ ಕಳುಹಿಸಿದ್ದರು.
ಅಖಿಲೇಶ್ ಯಾದವ್ ಅವರ ಚಿಕ್ಕಪ್ಪ ಶಿವಪಾಲ್ ಸಿಂಗ್ ಯಾದವ್ ಅವರಿಗೆ ಲೋಕೋಪಯೋಗಿ ಮತ್ತು ನೀರಾವರಿ ಇಲಾಖೆಯ ಜವಾಬ್ದಾರಿ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.