ADVERTISEMENT

ಉಪಮುಖ್ಯಮಂತ್ರಿ ಸ್ಥಾನ: ಸ್ಥಳೀಯ ಮುಖಂಡರೊಂದಿಗೆ ಚರ್ಚಿಸಲಿರುವ ಕೆ.ಸಿ.ವೇಣುಗೋಪಾಲ್‌

ಕಾಂಗ್ರೆಸ್‌ ಮುಖಂಡರನ್ನು ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಕುಮಾರಸ್ವಾಮಿ

ಏಜೆನ್ಸೀಸ್
Published 21 ಮೇ 2018, 16:36 IST
Last Updated 21 ಮೇ 2018, 16:36 IST
ಉಪಮುಖ್ಯಮಂತ್ರಿ ಸ್ಥಾನ: ಸ್ಥಳೀಯ ಮುಖಂಡರೊಂದಿಗೆ ಚರ್ಚಿಸಲಿರುವ ಕೆ.ಸಿ.ವೇಣುಗೋಪಾಲ್‌
ಉಪಮುಖ್ಯಮಂತ್ರಿ ಸ್ಥಾನ: ಸ್ಥಳೀಯ ಮುಖಂಡರೊಂದಿಗೆ ಚರ್ಚಿಸಲಿರುವ ಕೆ.ಸಿ.ವೇಣುಗೋಪಾಲ್‌   

ನವದೆಹಲಿ: ಬುಧವಾರ ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಸೋಮವಾರ ಕಾಂಗ್ರೆಸ್‌ ಮುಖಂಡರನ್ನು ಭೇಟಿಯಾದರು.

‘ಉಪಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ವಿಚಾರದ ಸಂಬಂಧ ಕರ್ನಾಟಕ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಅವರು ಸ್ಥಳೀಯ ಮುಖಂಡರೊಂದಿಗೆ ಚರ್ಚಿಸಿ ನಿರ್ಧರಿಸಲಿದ್ದಾರೆ. ವೇಣುಗೋಪಾಲ್‌ ಅವರಿಗೆ ತೀರ್ಮಾನ ಕೈಗೊಳ್ಳಲು ರಾಹುಲ್‌ ಗಾಂಧಿ ಅನುಮತಿ ನೀಡಿದ್ದಾರೆ.’ ಎಂದು ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಮೇ 23ರಂದು ಪ್ರಮಾಣ ವಚನ ಕಾರ್ಯಕ್ರಮ ನಿಗದಿಯಾಗಿದ್ದು, ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಹಾಗೂ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರನ್ನು ಕುಮಾರಸ್ವಾಮಿ ಆಹ್ವಾನಿಸಿದ್ದಾರೆ.

ADVERTISEMENT

ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರನ್ನೂ ಆಹ್ವಾನಿಸಿದ್ದಾರೆ. ಎಸ್‌ಪಿ ಮುಖ್ಯಸ್ಥ ಅಖಿಲೇಶ್‌ ಯಾದವ್‌, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಅಖಿಲೇಶ್‌ ಯಾದವ್‌, ಪುದುಚೆರಿ ಸಿಎಂ ನಾರಾಯಣಸ್ವಾಮಿ, ಕೇರಳ ಸಿಎಂ ಪಿನರಾಯಿ ವಿಜಯನ್‌, ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹಾಗೂ ತೆಲಂಗಾಣ ಸಿಎಂ ಚಂದ್ರಶೇಖರ್‌ ರಾವ್‌ ಸೇರಿ ಅನೇಕ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.